ಕ್ರೀಡೆ

ಸಿಖ್ ಪೇಟ ವಿವಾದ ಇತ್ಯರ್ಥಕ್ಕೆ ಏಷ್ಯನ್ ಒಕ್ಕೂಟ ಭರವಸೆ: ಕೆ.ಗೋವಿಂದರಾಜು

Published On :

ಕತಾರ್: ಕಳೆದ ವಾರ ಚೀನಾದಲ್ಲಿ ನಡೆದ ಏಷ್ಯನ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡದ ಸಿಖ್ ಆಟಗಾರರು ತಮ್ಮ ಪೇಟವನ್ನು ಕಳಚಿ ಆಡುವಂತೆ ಸೂಚಿಸಿದ್ದ ಅಧಿಕಾರಿಗಳು ವಿವಾದ ಸೃಷ್ಠಿಸಿದ್ದರು. ಈ ಸಮಸ್ಯೆಯನ್ನು ಏಷ್ಯನ್ ಬಾಸ್ಕೆಟ್‌ಬಾಲ್ ಒಕ್ಕೂಟದ ಮಹಾಸಭೆಯಲ್ಲಿ ಪ್ರಸ್ತಾಪಿಸಿದ್ದು, ಆದಷ್ಟು ಬೇಗ ಬಗೆಹರಿಸುವುದಾಗಿ ಏಷ್ಯನ್ ಬಾಸ್ಕೆಟ್‌ಬಾಲ್ ಒಕ್ಕೂಟ ಭರವಸೆ ನೀಡಿದೆ ಎಂದು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜು ತಿಳಿಸಿದ್ದಾರೆ.
ಗುರುವಾರ ಇಲ್ಲಿ ನಡೆದ ಏಷ್ಯನ್ ಬಾಸ್ಕೆಟ್‌ಬಾಲ್ ಒಕ್ಕೂಟದ ಮಹಾಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕೆ. ಗೋವಿಂದರಾಜು ಅವರು, ಸಭೆಯಲ್ಲಿ ವಿವಾದವನ್ನು ಪ್ರಸ್ತಾಪಿಸಿದರು.
ಈ ಕುರಿತು ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿರುವ ಕೆ. ಗೋವಿಂದರಾಜು ಅವರು, ಮಹಾಸಭೆಯಲ್ಲಿ ಸಿಖ್ ಆಟಗಾರರಿಗೆ ಪೇಟವನ್ನು ಬಿಚ್ಚಿಡುವಂತೆ ಆಗ್ರಹಿಸಿದ ವಿಚಾರವನ್ನು ಪ್ರಸ್ತಾಪಿಸಿದ್ದೇನೆ.
ಸಮಸ್ಯೆಯನ್ನು ಆಲಿಸಿದ ಒಕ್ಕೂಟ ಈ ವಿಷಯವನ್ನು ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಸಂಸ್ಥೆಯ ತಾಂತ್ರಿಕ ಸಮಿತಿಯ ಮುಂದೆ ಪ್ರಸ್ತಾಪಿಸಲಾಗುವುದು. ನಂತರ ಈ ಸಮಸ್ಯೆಗೆ 2-3 ತಿಂಗಳ ಒಳಗಾಗಿ ಪರಿಹಾರವನ್ನು ರಚಿಸಲಾಗುವುದು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.