ಕ್ರೀಡೆ

ಆಕ್ರಮಣಕಾರಿ ಮನೋಭಾವ ಪ್ರದರ್ಶಿಸುವೆ: ಜೋಸ್ ಬಟ್ಲರ್

Published On :

ಸೌಥಾಂಪ್ಟನ್: ಭಾರತ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ನನ್ನ ವೃತ್ತಿಜೀವನದ ಮಹತ್ವದ ಪಂದ್ಯ. ಏಕೆಂದರೆ, ಇದು ನನ್ನ ಟೆಸ್ಟ್ ವೃತ್ತಿ ಬದುಕಿನ ಪಂದ್ಯವಾಗಿದೆ. ಈ ಮಹತ್ವದ ಟೆಸ್ಟ್‌ನಲ್ಲಿ ತಾವು ಆಕ್ರಮಣಕಾರಿ ಮನೋಭಾವ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಜೋಸ್ ಬಟ್ಲರ್ ವಿಶ್ವಾಸದಿಂದ ಪ್ರತಿಕ್ರಿಯಿಸಿದ್ದಾರೆ.
ಗಾಯದ ಸಮಸ್ಯೆ ಮತ್ತು ಕಳಪೆ ಫಾರ್ಮ್ ಹಿನ್ನೆಲೆಯಲ್ಲಿ ತಂಡದಿಂದ ಹೊರನಡೆದಿರುವ ಮ್ಯಾಟ್ ಪ್ರಯರ್ ಸ್ಥಾನದಲ್ಲಿ ಇಂಗ್ಲೆಂಡ್ ತಂಡ ಕೂಡಿಕೊಂಡಿರುವ ಜೋಸ್ ಬಟ್ಲರ್, ಉತ್ತಮ ಪ್ರದರ್ಶನ ನೀಡುವ ಗುರಿ ತಮ್ಮದಾಗಿದೆ. ಟೆಸ್ಟ್ ಆಡುವುದೇ ನನ್ನ ಜೀವನದ ಮಹತ್ವದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಇಂಗ್ಲೆಂಡ್ ಮತ್ತು ಭಾರತ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಸೌಥಾಂಪ್ಟನ್‌ನಲ್ಲಿ ಇದೇ ಭಾನುವಾರದಿಂದ ಆರಂಭವಾಗಲಿದೆ.
ನಾಟಿಂಗ್‌ಹ್ಯಾಮ್‌ನಲ್ಲಿನ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯಗೊಂಡರೆ, ಲಾರ್ಡ್ಸ್‌ನಲ್ಲಿನ ಎರಡನೇ ಟೆಸ್ಟ್‌ನಲ್ಲಿ ಭಾರತ 95 ರನ್‌ಗಳಿಂದ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಸದ್ಯ 0-1ರಿಂದ ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಇಂಗ್ಲೆಂಡ್ ಮುಂದಿನ ಪಂದ್ಯ ಗೆದ್ದುಕೊಳ್ಳಲೇಬೇಕಾದ ಒತ್ತಡದಲ್ಲಿದೆ.
2012ರಲ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಬಟ್ಲರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಬಹುಬೇಗನೆ ತಂಡದಲ್ಲಿ ಆಡುವ ಅಂತಿಮ ಹನ್ನೊಂದರೊಳಗೆ ಕಾಯಂ ಸ್ಥಾನ ಸಂಪಾದಿಸಿದರು. ಅಲ್ಲದೆ, ಟಿ-20ಯಲ್ಲೂ ಸಹ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.