ಇಶಾಂತ್ ಔಟ್, ಟೆಸ್ಟ್ಗೆ ಪಂಕಜ್
ಸೌಥಾಂಪ್ಟನ್: ಲಾರ್ಡ್ಸ್ ಟೆಸ್ಟ್ನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲವು ತಂದುಕೊಟ್ಟು ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದ ಇಶಾಂತ್ ಶರ್ಮಾ, ಎಡ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಪರಿಣಾಮ ಇಂಗ್ಲೆಂಡ್ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಲಾರ್ಡ್ಸ್ನಲ್ಲಿ ನಡೆದ ಎರಡನೇ ಟೆಸ್ಟ್ನ ಎರಡನೇ ಇನಿಂಗ್ಸ್ನಲ್ಲಿ ಇಶಾಂತ್ 74 ರನ್ ನೀಡಿ 7 ವಿಕೆಟ್ ಪಡೆಯುವ ಮೂಲಕ ಭಾರತ ತಂಡದ ಜಯಭೇರಿಗೆ ಕಾರಣರಾಗಿದ್ದರು. ಆದರೆ, ಭಾನುವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದ ವೇಳೆ ಟಾಸ್ಗೆ ಮುನ್ನ ಇಶಾಂತ್ ಅಲಭ್ಯತೆಯನ್ನು ನಾಯಕ ಧೋನಿ ತಿಳಿಸಿದರು.
ಇಶಾಂತ್ ಜಾಗದಲ್ಲಿ ಮತ್ತೊಬ್ಬ ಮಧ್ಯಮ ವೇಗದ ಬೌಲರ್ ಪಂಕಜ್ ಸಿಂಗ್, ಟೆಸ್ಟ್ಗೆ ಪದಾರ್ಪಣೆ ಮಾಡುವ ಕನಸು ನನಸು ಮಾಡಿಕೊಂಡರು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಪಂಕಜ್ಗೆ ಟೆಸ್ಟ್ ಕ್ಯಾಪ್ ನೀಡಿದರು.
ಈ ಮಧ್ಯೆ ಇಂಗ್ಲೆಂಡ್ ತಂಡದಲ್ಲಿ ಮ್ಯಾಟ್ ಪ್ರಯರ್ ಸ್ಥಾನದಲ್ಲಿ ಆಡಲು ಬಂದಿರುವ ವಿಕೆಟ್ ಕೀಪರ್ ಜೋಸ್ ಬಟ್ಲರ್ ಸಹ ಟೆಸ್ಟ್ಗೆ ಪದಾರ್ಪಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

