ಸರ್ಬಿಯಾ ವಿರುದ್ಧ ಭಾರತಕ್ಕೆ ಗೆಲ್ಲುವ ಅವಕಾಶ: ವಿಜಯ್ ಅಮೃತ್ರಾಜ್
ನವದೆಹಲಿ: ಬೆಂಗಳೂರಿನಲ್ಲಿ ನಡೆಯಲಿರುವ ಡೇವಿಸ್ ಕಪ್ ಪಂದ್ಯದಲ್ಲಿ ಪ್ರಬಲ ಸರ್ಬಿಯಾ ವಿರುದ್ಧ ಗೆಲ್ಲುವ ಅವಕಾಶ ಭಾರತಕ್ಕೆ ಇದೆ ಎಂದು ಭಾರತ ಮಾಜಿ ಟೆನಿಸ್ ಆಟಗಾರ ವಿಜಯ್ ಅಮೃತ್ರಾಜ್ ಅಭಿಪ್ರಾಯಪಟ್ಟಿದ್ದಾರೆ.
ಮುಂಬರುವ ಸೆಪ್ಟೆಂಬರ್ 12-14ರಂದು ನಡೆಯಲಿರುವ ಪಂದ್ಯದಲ್ಲಿ ಗೆಲವು ದಾಖಲಿಸುವ ತಂಡ 16 ರಾಷ್ಟ್ರಗಳ ವಿಶ್ವ ಎಲಿಟ್ ಗುಂಪಿಗೆ ಅರ್ಹತೆ ಪಡೆಯಲಿದೆ.
ಸರ್ಬಿಯಾದ ಪ್ರಮುಖ ಆಟಗಾರ ನೊವಾಕ್ ಜೋಕೊವಿಚ್ ಯು.ಎಸ್ ಓಪನ್ ಗ್ರ್ಯಾನ್ ಸ್ಲ್ಯಾಮ್ನಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಭಾರತಕ್ಕೆ ಆಗಮಿಸುವ ಅವಕಾಶ ತೀರಾ ಕಡಿಮೆ ಇದೆ. ಹಾಗಾಗಿ ಭಾರತ ಸರ್ಬಿಯಾ ವಿರುದ್ಧ ಗೆಲವು ದಾಖಲಿಸಲು ಉತ್ತಮ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜೋಕೊವಿಚ್ ಭಾರತಕ್ಕೆ ಆಗಮಿಸುವುದಿಲ್ಲ. ಕೊರಿಯಾದಲ್ಲಿ ನಡೆದ ಕಳೆದ ಪಂದ್ಯದಲ್ಲಿ ಭಾರತ ಆತಿಥೇಯರ ವಿರುದ್ಧ ಗೆಲವು ದಾಖಲಿಸಿತ್ತು. ತಂಡದ ನಾಯಕ ಆನಂದ್ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತದ ಪ್ರಸಕ್ತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಪ್ರವಾಸಿಗರು ಇಲ್ಲಿನ ವಾತಾವರಣದಲ್ಲಿ ಆಡಲು ಕಷ್ಟವಾಗುತ್ತದೆ. ಹಾಗಾಗಿ ಭಾರತ ತಂಡ ಗೆಲವು ದಾಖಲಿಸುವ ಅವಕಾಶ ಇದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

