ಕ್ರೀಡೆ

ಡೆಲ್ಲಿ ವಿಮಾನ ನಿಲ್ದಾಣದಲ್ಲಿ ಶೂಟಿಂಗ್ ಮ್ಯಾನೇಜರ್ ತಡೆ

Published On :

ನವದೆಹಲಿ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ಶಾಟ್‌ಗನ್ ತಂಡದ ಮ್ಯಾನೇಜರ್, ನಿಷೇಧಿತ ವಸ್ತುಗಳನ್ನು ತರುತ್ತಿರುವ ಹಿನ್ನಲೆಯಲ್ಲಿ ಅವರನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆ ಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಂಡದ ಮ್ಯಾನೇಜರ್ ಅರಾರುಲ್ ಹಸನ್ ಚೌಧರಿ ಪದಕ ವಿಜೇತ ಅನಿಸಾ ಸಯ್ಯದ್ ಹಾಗೂ ರಾಹಿ ಸಾಮೊಬಟ್ ಜತೆಗೆ ಭಾರತಕ್ಕೆ ಮರಳುತ್ತಿದ್ದರು.
ಹಸನ್ ಚೌಧರಿ ಅವರು ಬೇಟೆಗೆ ಬಳಸುವ ಮದ್ದು ಗುಂಡುಗಳನ್ನು ತರುತ್ತಿರುವ ವೇಳೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಭಾರತದ ರಾಷ್ಟ್ರೀಯ ರೈಫಲ್ ಸಂಸೆಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.