ಕ್ರೀಡೆ

ಪಳ್ಳಿಕಲ್- ದೀಪಿಕಾ ಜೋಡಿಗೆ ಗೆಲವು

Published On :

ಗ್ಲಾಸ್ಗೋ: ಭಾರತದ ಮಹಿಳಾ ಸ್ಕ್ವಾಷ್ ತಾರೆಗಳಾದ ದೀಪಿಕಾ ಪಳ್ಳಿಕಲ್ ಹಾಗೂ ಜೋಷ್ನಾ ಚಿನ್ನಪ್ಪ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಮ್ಮ ಪದಕದ ಬರವನ್ನು ನೀಗಿಸುವ ಭರವಸೆ ಮೂಡಿಸಿದ್ದಾರೆ. ಬುಧವಾರ ನಡೆದ ಡಿ ಗುಂಪಿನ ಮಹಿಳೆಯರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ದೀಪಿಕಾ ಹಾಗೂ ಜೋಷ್ನಾ ತಮ್ಮ ಎದುರಾಳಿ ವಿಶ್ವದ ನಂಬರ್ ಒನ್ ಆಟಗಾರ್ತಿ ನಿಕೊಲ್ ಡೇವಿಡ್ ಹಾಗೂ ಲೌ ವೀ ವಿರುದ್ಧ 11-8, 11-5 ಅಂತರದಲ್ಲಿ ಗೆಲವು ದಾಖಲಿಸಿದ್ದಾರೆ. ಈ ಜೋಡಿ ತಮ್ಮ ಮುಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಮೆಗನ್ ಕ್ರೀಗ್ ಹಾಗೂ ಕೇಲಿ ಲಿಂಡ್ಸೆನ್ ಅವರನ್ನು ಎದುರಿಸಲಿದ್ದಾರೆ. ಈ ಮೂಲಕ ಕ್ರೀಡಾಕೂಟದ ಆರಂಭದಲ್ಲಿ ನೀರಸ ಪ್ರದರ್ಶನದಿಂದ ಕಂಗೆಟ್ಟಿದ್ದ ಭಾರತೀಯ ಸ್ಕ್ವಾಷ್ ಆಟಗಾರರು ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.