ಕ್ರೀಡೆ

ಸೆಮೀಸ್ ಸ್ಥಾನಕ್ಕೆ ಭಾರತದ ಚಿತ್ತ

Published On :

ಗ್ಲಾಸ್ಗೋ: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಹೋರಾಟಕಾರಿ ಪ್ರದರ್ಶನದ ನಂತರ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಂಡಿರುವ ಭಾರತ ಪುರುಷರ ಹಾಕಿ ತಂಡ, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಉಪಾಂತ್ಯದ ಸುತ್ತಿಗೆ ಪ್ರವೇಶಿಸಲು ಎದುರು ನೋಡುತ್ತಿದೆ.
ಗುರುವಾರ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಗೆಲವು ಸಾಧಿಸುವ ವಿಶ್ವಾಸದಲ್ಲಿದೆ. ಈ ಪಂದ್ಯ ಉಭಯ ತಂಡಗಳ ಪಾಲಿಗೆ ಮಹತ್ವದ್ದಾಗಿದ್ದು, ಅಗ್ರ ಸ್ಥಾನ ಪಡೆದಿರುವ ಆಸ್ಟ್ರೇಲಿಯಾ ಜತೆಗೆ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಲು ಹವಣಿಸುತ್ತಿವೆ.
ಉಭಯ ತಂಡಗಳು ಎರಡು ಪಂದ್ಯಗಳಲ್ಲಿ ಗೆಲವು ದಾಖಲಿಸುವ ಮೂಲಕ ಆರು ಅಂಕಗಳನ್ನು ಪಡೆದಿದ್ದು, ಭಾರತ, ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಡಿಮೆ ಅಂತರದಿಂದ ಸೋಲನುಭವಿಸಿ ದ್ವಿತೀಯ ಸ್ಥಾನ ಕಾಯ್ದುಕೊಂಡಿದೆ.
ಭಾರತ ಗೋಲು ಅಂತರದಲ್ಲಿ ಪ್ಲಸ್ 4 ಪಡೆದರೆ, ದಕ್ಷಿಣ ಆಫ್ರಿಕಾ ಶೂನ್ಯ ಸಂಪಾದನೆಯಲ್ಲಿದೆ. ಹಾಗಾಗಿ ಭಾರತ ಮೇಲುಗೈ ಸಾಧಿಸಲು ನೆರವಾಗಿದೆ. ಹಾಗಾಗಿ ಈ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿದರೂ ಮುಂದಿನ ಸುತ್ತಿಗೆ ಅನಾಯಾಸವಾಗಿ ಪ್ರವೇಶಿಸಲಿದೆ. ಈ ಕಾರಣದಿಂದ ದಕ್ಷಿಣ ಆಫ್ರಿಕಾ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದರೂ, ದಿಟ್ಟ ಹೋರಾಟ ನೀಡಿತ್ತು. ಹಾಗಾಗಿ 2-4 ಅಂತರದ ಸೋಲಿನಿಂದ ತಂಡದ ಆತ್ಮ ವಿಶ್ವಾಸಕ್ಕೆ ಯಾವುದೇ ತೊಂದರೆಯಾಗಿಲ್ಲ. ಅಲ್ಲದೆ ತಂಡ, ಪೆನಾಲ್ಟಿ ಅವಕಾಶವನ್ನು ಸಾಧ್ಯವಾದಷ್ಟು ಉತ್ತಮವಾಗಿ ಬಳಸಿಕೊಳ್ಳುತ್ತಿರುವುದು ತಂಡದ ಪ್ಲಸ್ ಪಾಯಿಂಟ್ ಆಗಿದೆ.
ಕಳೆದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಪಡೆದಿದ್ದ ಭಾರತ ಹಾಕಿ ತಂಡ ಈ ಬಾರಿಯೂ ಅದೇ ರೀತಿಯ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.