ಈಡನ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ಗೆ ಸನ್ಮಾನ

ಕೋಲ್ಕತಾ: ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿರುವ ಕೋಲ್ಕತಾ ನೈಟ್ರೈಡರ್ಸ್ ತಂಡಕ್ಕೆ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆ ಹಾಗೂ ಸರ್ಕಾರ ಮಂಗಳವಾರ ಈಡನ್ ಗಾರ್ಡನ್ನಲ್ಲಿ ಸನ್ಮಾನ ಸಮಾರಂಭವನ್ನು ಏರ್ಪಡಿಸಿದೆ.
2012ರಲ್ಲಿ ಕೆಕೆಆರ್ ತಂಡ ಮೊದಲ ಬಾರಿಗೆ ಚಾಂಪಿಯನ್ ಆಗಿದ್ದಾಗ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಾಗಾಗಿ ಈ ಬಾರಿಯ ಸಮಾರಂಭ ಯಾವ ರೀತಿ ನಡೆಯಲಿದೆ ಎಂಬ ಕುತೂಹಲ ಹೆಚ್ಚಿದೆ.
ಮಂಗಳವಾರ ಕೆಕೆಆರ್ ತವರಿನ ಅಂಗಣ ಈಡನ್ ಗಾರ್ಡನ್ನ ಎಲ್ಲಾ ರಸ್ತೆಗಳು ಅಭಿಮಾನಿಗಳಿಗಾಗಿ ಮೀಸಲಿಡಲಾಗಿದೆ. ಅಲ್ಲದೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಮೈದಾನದ ಗೇಟ್ಗಳು ತೆರೆದಿರುತ್ತವೆ.
ಸಂಸ್ಥೆಯ ಸದಸ್ಯರ ಜತೆಗೆ ಕ್ರೀಡಾಂಗಣಕ್ಕೆ ಪ್ರವೇಶವಿದ್ದು, ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಈ ಸಮಾರಂಭವನ್ನು ಕಳೆದ ಬಾರಿಗಿಂತ ಹೆಚ್ಚು ಸ್ಮರಣೀಯವಾಗಿ ನಡೆಸಲು ನಿರ್ಧರಿಸಿದ್ದೇವೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ಜಂಟಿ ಕಾರ್ಯದರ್ಶಿ ಸುಬೀರ್ ಗಂಗೂಲಿ ತಿಳಿಸಿದ್ದಾರೆ.
ಕೆಕೆಆರ್ ಗೆಲವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ಬಾರಿ ಕೆಕೆಆರ್ ಪ್ರಶಸ್ತಿ ಗೆದ್ದಾಗ ಪಶ್ಚಿಮ ಬಂಗಾಳ ಸರ್ಕಾರ ತಂಡದ ಪ್ರತಿ ಸಿಬ್ಬಂದಿಗೆ ಚಿನ್ನದ ಪದಕ, ಚಿನ್ನದ ಸರವನ್ನು ಉಡುಗೊರೆಯಾಗಿ ನೀಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿತ್ತು.
ಈಗ ಸರ್ಕಾರ ಶಾರದ ಚಿಟ್ ಫಂಡ್ ಹಗರಣದ ಹಿನ್ನಲೆಯಲ್ಲಿ ಯಾವ ರೀತಿಯಲ್ಲಿ ಸಮಾರಂಭವನ್ನು ಆಯೋಜಿಸಲಿದೆ ಎಂಬುದನ್ನು ಅಲ್ಲಿನ ಜನರಲ್ಲಿ ಕೌತುಕ ಉಂಟುಮಾಡಿದೆ.
ಅಲ್ಲದೆ ಕೆಕೆಆರ್ ತಂಡ ಟ್ರೋಫಿಯೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದು, ಅಭಿಮಾನಿಗಳು ಕಿಕ್ಕಿರಿದು ಸೇರುವ ನಿರೀಕ್ಷೆಗಳಿವೆ.
ತಂಡ ಕೋಲ್ಕತಾಕ್ಕೆ ತೆರಳಿದ್ದು, ಬಾಲಿವುಡ್ತಾರೆಗಳು ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ.
ನಂಬಲಾಗದ ಸಾಧನೆ: ಉತ್ತಪ್ಪ
ಬೆಂಗಳೂರು: ಪಂದ್ಯಾವಳಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್ ಎನಿಸಿಕೊಳ್ಳದ ತಂಡ, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದನ್ನು ನಂಬಲಾಗುತ್ತಿಲ್ಲ ಎಂದು ಪ್ರಸಕ್ತ ಋತುವಿನಲ್ಲಿ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪಂದ್ಯಾವಳಿಯಲ್ಲಿ ಉತ್ತಪ್ಪ ಅವರು 10ಕ್ಕೂ ಹೆಚ್ಚು ಬಾರಿ ಸತತವಾಗಿ 40ಕ್ಕೂ ಅಧಿಕ ರನ್ ದಾಖಲಿಸಿದ್ದಾರೆ.ಇದರೊಂದಿಗೆ ಉತ್ತಪ್ಪ, ಪಂದ್ಯಾವಳಿಯ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದಿದ್ದ ಕೋಲ್ಕತಾ ತಂಡ, ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಮಹತ್ವದ ಪಾತ್ರವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


