ವಿಂಡೀಸ್ ಮೇಲೆ ಕಿವೀಸ್ ಪ್ರಭುತ್ವ
ಕಿಂಗ್ಸ್ಟನ್: ಅನುಭವಿ ವೇಗಿ ಟಿಮ್ ಸೌಥಿ (4 ವಿಕೆಟ್) ಮತ್ತು ಈ ಪಂದ್ಯದಲ್ಲಷ್ಟೇ ಪದಾರ್ಪಣೆ ಮಾಡಿದ ಸ್ಪಿನ್ನರ್ ಮಾರ್ಕ್ ಕ್ರೈಗ್ (4 ವಿಕೆಟ್) ಸಮರ್ಥ ಬೌಲಿಂಗ್ನೊಂದಿಗೆ ನ್ಯೂಜಿಲೆಂಡ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಭುತ್ವ ಸಾಧಿಸಿದೆ.
ಮೊದಲ ಇನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 262 ರನ್ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್, ದ್ವಿತೀಯ ಇನಿಂಗ್ಸ್ ಆರಂಭಿಸಿ 2 ವಿಕೆಟ್ ನಷ್ಟಕ್ಕೆ 14 ರನ್ ಗಳಿಸುವ ಮೂಲಕ ಒಟ್ಟಾರೆ 260 ರನ್ಗಳ ಲೀಡ್ ಪಡೆದುಕೊಂಡಿದೆ.
ಆರಭಿಕ ಆಟಗಾರ ಪೀಟರ್ ಫುಲ್ಟಾನ್ ಮತ್ತು ಮೊದಲ ಇನಿಂಗ್ಸ್ನಲ್ಲಿ ಶತಕ ದಾಖಲಿಸಿದ್ದ ಕೇನ್ ವಿಲಿಯಮ್ಸನ್ ಅವರು ಸುಲಭವಾಗಿ ವಿಕೆಟ್ ಒಪ್ಪಿಸಿದರು. ಆದರೆ, 4ನೇ ದಿನ ಪಂದ್ಯದ ಮೇಲೆ ಪ್ರವಾಸಿ ತಂಡ ಸಂಪೂರ್ಣ ಹಿಡಿತ ಸಾಧಿಸುವ ಎಲ್ಲ ಸಾಧ್ಯತೆಗಳಿವೆ.
ವೆಸ್ಟ್ ಇಂಡೀಸ್ ಪರ ಮೊದಲ ಇನಿಂಗ್ಸ್ನಲ್ಲಿ ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ (64) ಮತ್ತು ಶಿವನಾರಾಯಣ ಚಂದ್ರಪಾಲ್ (ಅಜೇಯ 84) ಮಾತ್ರ ಅರ್ಧ ಶತಕ ದಾಖಲಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ, ಇತರ ಬ್ಯಾಟ್ಸ್ಮನ್ಗಳು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಹೀಗಾಗಿ ವಿಂಡೀಸ್ ಅಲ್ಪ ಮೊತ್ತಕ್ಕೆ ಪೆವಿಲಿಯನ್ ಸೇರಿತು.
ಸಂಕ್ಷಿಪ್ತ ಸ್ಕೋರ್:
ನ್ಯೂಜಿಲೆಂಡ್ ಮೊದಲ ಇನಿಂಗ್ಸ್ 508/7 (ಡಿಕ್ಲೇರ್)
ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ 262
ನ್ಯೂಜಿಲೆಂಡ್ ದ್ವಿತೀಯ ಇನಿಂಗ್ಸ್ 14/2
ಟಾಮ್ ಲಥಾಮ್ ಅಜೇಯ 8
ಇಶ್ ಸೋಧಿ ಅಜೇಯ 4
ಬೌಲಿಂಗ್: ಟೇಲರ್ 4/1, ರೋಚ್ 4/1
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

