2019ರ ಏಷ್ಯನ್ ಗೇಮ್ಸ್ ಭಾರತ ಬಿಡ್
ನವದೆಹಲಿ: ಪ್ರತಿಷ್ಠಿ ಏಷ್ಯನ್ ಗೇಮ್ಸ್ ಆತಿಥ್ಯ ವಹಿಸಿಕೊಳ್ಳಲು ಭಾರತ ಎದುರು ನೋಡುತ್ತಿದೆ. 2019ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆತಿಥ್ಯ ಪಡೆಯುವ ಮೂಲಕ ಅದನ್ನು ರಾಜಧಾನಿ ದೆಹಲಿಯಲ್ಲಿ ನಡೆಸುವ ಚಿಂತನೆ ನಡೆಯುತ್ತಿದೆ.2010ರಲ್ಲಿ ಆಯೋಜಿಸಲಾಗಿದ್ದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣಗಳಿಂದ ಹೋಗಿದ್ದ ರಾಷ್ಟ್ರದ ಗರಿಮೆಯನ್ನು ಮರಳಿ ಪಡೆಯಲು ಈ ಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.ಅಲ್ಲದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನಾಯಕತ್ವದ ಎನ್ಡಿಯ ಸರ್ಕಾರ ಮತ್ವದ ಪಂದ್ಯಾವಳಿಯ ಆತಿಥ್ಯ ವಹಿಸಿಕೊಳ್ಳಲು ಸಮರ್ಥವಾಗಿದೆ ಎಂದು ಕ್ರೀಡಾ ಸಚಿವರು ಹೇಳಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ನಿರ್ಮಿಸಲಾಗಿದ್ದ ಕ್ರೀಡಾ ಮೂಲಭೂತ ಸೌಕರ್ಯಗಳು ಸಿದ್ಧವಾಗಿರುವ ನವದೆಹಲಿಯಲ್ಲಿ ಏಷ್ಯನ್ ಕ್ರೀಡಾಕೂಟ ನಡೆಸಲು ಬಿಡ್ ಮಾಡುವ ಯೋಜನೆ ಇದೆ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ (ಐಒಎ) ಮೂಲಗಳು ತಿಳಿಸಿವೆ. '2019ರ ಏಷ್ಯನ್ ಗೇಮ್ಸ್ ಆತಿಥ್ಯ ನಮಗೆ ದೊರಕಿದರೆ, ನಾವು ಹೆಮ್ಮೆಪಡಲಿದ್ದೇವೆ. ಈ ಕುರಿತು ಭಾರತೀಯ ಒಲಿಂಪಿಕ್ಸ್ ಸಂಸ್ಥೆ ನಮಗೆ ಪ್ರಸ್ತಾವನೆ ಸಲ್ಲಿಸುವ ಕುರಿತು ನಾವು ಕಾಯುತ್ತಿದ್ದೇವೆ. ಇದನ್ನು ನಿಗದಿತ ಸಮಯದಲ್ಲೇ ಅದು ಸಲ್ಲಿಸಲಿದೆಯೇ ಎಂದು ನೋಡೋಣ' ಎಂದು ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ್ ಸೊನೊವಾಲ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

