ಕ್ರೀಡೆ

ಡ್ಯಾನ್, ಚೆನ್‌ಗೆ ಶಾಕ್

Published On :

ಟೋಕಿಯೊ: ಒಲಿಂಪಿಕ್ಸ್ ಹಾಗೂ ವಿಶ್ವ ಚಾಂಪಿಯನ್ ಚೀನಾದ ಲಿನ್ ಡ್ಯಾನ್ ಹಾಗೂ ವಿಶ್ವದ ಎರಡನೇ ಶ್ರೇಯಾಂಕಿತ ಚೆನ್ ಲಾಂಗ್ ಅವರು ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಚ್ಚರಿಯ ಸೋಲು ಕಂಡಿದ್ದು, ಕ್ವಾರ್ಟರ್‌ಫೈನಲ್ ಹಾದಿಯನ್ನೇ ದಾಟಲು ವಿಫಲರಾಗಿದ್ದಾರೆ.
ಐದು ಬಾರಿಯ ವಿಶ್ವ ಚಾಂಪಿಯನ್ ಲಿನ್ ಡ್ಯಾನ್ ಅವರು ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತ ಡೆನ್ಮಾರ್ಕ್ ಆಟಗಾರ ಜಾನ್ ಜೋರ್ಗೆನ್‌ಸೆನ್ ಎದುರು 19-21, 21-13, 16-21 ಅಂಕಗಳಿಂದ ತಲೆಬಾಗಿಸಿದರು.
ಒಂದು ಗಂಟೆ ನಾಲ್ಕು ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಯೂರೋಪಿಯನ್ ಚಾಂಪಿಯನ್ ಜೋರ್ಗೆನ್‌ಸೆನ್ ಅವರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಿನ್ ಡ್ಯಾನ್‌ಗೆ ಭಾರಿ ಶಾಕ್ ನೀಡಿದರು.
ಈ ಮಧ್ಯೆ ಮತ್ತೊಂದು ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಚೆನ್ ಲಾಂಗ್ ಅವರು ಹಾಂಕಾಂಗ್‌ನ ಹೂ ಯನ್ ವಿರುದ್ಧ 21-18, 19-21, 15-21 ಅಂಕಗಳಿಂದ ಸೋಲನುಭವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.