ಬಾಂಗ್ಲಾ ದೇಶಕ್ಕೆ ತೆರಳಿದ ಟೀಂ ಇಂಡಿಯಾ
ಕೋಲ್ಕತಾ: ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಸುರೇಶ್ ರೈನಾ ನಾಯಕತ್ವದ 15 ಸದಸ್ಯರ ಭಾರತ ಕ್ರಿಕೆಟ್ ತಂಡ ಶುಕ್ರವಾರ ಢಾಕಾಕ್ಕೆ ತೆರಳಿತು. ಭಾರತ ಮತ್ತು ಬಾಂಗ್ಲಾ ನಡುವೆ ನಡೆಯಲಿರುವ ಸರಣಿ ಭಾನುವಾರದಿಂದ ಆರಂಭವಾಗಲಿದೆ.
ಮಂಬರುವ ಇಂಗ್ಲೆಂಡ್ ಪ್ರವಾಸದ ಹಿನ್ನೆಲೆಯಲ್ಲಿ, ನಾಯಕ ಮಹೇಂದ್ರ ಸಿಂಗ್ ಧೋನಿ, ಉಪನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಎರಡನೇ ದರ್ಜೆಯ ಭಾರತ ತಂಡ ಬಾಂಗ್ಲಾದೇಶಕ್ಕೆ ತೆರಳಿದೆ.
ರೈನಾ ಮತ್ತು ಕೆಲ ಸದಸ್ಯರು ಗುರುವಾರ ಸಂಜೆಯೇ ನಗರಕ್ಕೆ ಆಗಮಿಸಿ ಹೋಟೆಲ್ಲೊಂದರಲ್ಲಿ ತಂಗಿದ್ದರು. ನಂತರ ಶುಕ್ರವಾರ ಬೆಳಗಿನ ವಿಮಾನದಲ್ಲಿ ಬಾಂಗ್ಲಾಕ್ಕೆ ತೆರಳಿದರು.ಆಂಧ್ರಪ್ರದೇಶ ಕ್ರಿಕೆಟ್ ಸಂಸ್ಥೆಯ ಸದಸ್ಯ (ಎಸಿಎ) ಸತ್ಯ ಪ್ರಸಾದ್ ಯಚೆಂದ್ರಾ ಅವರು ತಂಡದ ಮ್ಯಾನೇಜರ್ ಆಗಿದ್ದಾರೆ.ಮುಶ್ಫಿಖರ್ ರಹೀಮ್ ನಾಯಕತ್ವದ ಬಾಂಗ್ಲಾ ತಂಡದ ವಿರುದ್ಧ ಜೂನ್ 15, 17 ಹಾಗೂ 19ರಂದು ಮಿರ್‌ಪುರದಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ರೈನಾ ಅವರು ಇದುವರೆಗೂ ಭಾರತ ತಂಡಕ್ಕೆ 9 ಪಂದ್ಯಗಳಲ್ಲಿ ನಾಯಕರಾಗಿದ್ದಾರೆ. ಅದರಲ್ಲಿ ಭಾರತ 4ರಲ್ಲಿ ಗೆದ್ದರೆ, 5 ಪಂದ್ಯಗಳಲ್ಲಿ ಸೋಲನುಭವಿಸಿದೆ.
ಭಾರತ ತಂಡ: ಸುರೇಶ್ ರೈನಾ (ನಾಯಕ), ರಾಬಿನ್ ಉತ್ತಪ್ಪ, ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಅಂಬಟಿ ರಾಯುಡು, ಮನೋಜ್ ತಿವಾರಿ, ಕೇದಾರ್ ಜಾಧವ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಪರ್ವೇಜ್ ರಸೂಲ್, ಅಕ್ಷರ್ ಪಟೇಲ್, ವಿನಯ್ ಕುಮಾರ್, ಉಮೇಶ್ ಯಾದವ್, ಸ್ಟುವಟ್ ಬಿನ್ನಿ, ಮೋಹಿತ್ ಶರ್ಮಾ ಹಾಗೂ ಅಮಿತ್ ಮಿಶ್ರಾ.
8ನೇ ಸ್ಥಾನದಲ್ಲೇ ಉಳಿದ ಅಶ್ವಿನ್
ದುಬೈ: ಕಳೆದ ಮೂರು ತಿಂಗಳಿಂದ ಭಾರತ ಕ್ರಿಕೆಟ್ ತಂಡ ಟೆಸ್ಟ್ ಪಂದ್ಯಗಳನ್ನಾಡದೇ ಇರಬಹುದು. ಆದರೆ, ತಂಡದ ಸ್ಪಿನ್ ಬೌಲರ್ ಆರ್. ಅಶ್ವಿನ್ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ಬೌಲಿಂಗ್ ವಿಭಾಗದಲ್ಲಿ ತಮ್ಮ 8ನೇ ಸ್ಥಾನ ಉಳಿಸಿಕೊಂಡಿದ್ದಾರೆ.
ಅಶ್ವಿನ್ ಅವರು ಇದುವರೆಗೂ 19 ಟೆಸ್ಟ್ ಪಂದ್ಯಗಳನ್ನಾಡಿದ್ದು, 104 ವಿಕೆಟ್ ಹಾಗೂ 788 ರನ್ ಗಳಿಸಿದ್ದಾರೆ. ಇದರೊಂದಿಗೆ ಡೇಲ್ ಸ್ಟೇಯ್ನ್ ಅಗ್ರಸ್ಥಾನ ಪಡೆದಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ಆಲ್ರೌಂಡ ಆಟಗಾರ ವೆರ್ನೂನ್ ಫಿಲ್ಯಾಂಡರ್ ನಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಚೇತೇಶ್ವರ ಪೂಜಾರ್ ಅವರು ಮೂರು ಸ್ಥಾನ ಮೇಲಕ್ಕೇರಿದ್ದು, 7ನೇ ಸ್ಥಾನದಲ್ಲಿದ್ದಾರೆ. ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (10) ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಏತನ್ಮಧ್ಯೆ, ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದ ನ್ಯೂಜಿಲೆಂಡ್‌ನ ಟಿಮ್ ಸೌಥಿ ಮೂರು ಸ್ಥಾನ ಮೇಲಕ್ಕೇರಿದ್ದು, 5ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

