ಕ್ರೀಡೆ

ಕಾರ್ತಿಕ್ ವಿದಾಯ

ಕಾರ್ತಿಕ್ ವಿದಾಯ
Published On :

ನವದೆಹಲಿ: ಹಿರಿಯ ಸ್ಪಿನ್ ಬೌಲರ್ ಮುರಳಿ ಕಾರ್ತಿಕ್ ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಶನಿವಾರ ವಿದಾಯ ಹೇಳಿದ್ದಾರೆ. ಕಾರ್ತಿಕ್ ಅವರು 1999ರಿಂದ 2007ರವರೆಗೆ ಭಾರತ ತಂಡದ ಪರ 8 ಟೆಸ್ಟ್ ಮತ್ತು 37 ಏಕದಿನ ಪಂದ್ಯಗಳನ್ನಾಡಿದ್ದಾರೆ. ಟೆಸ್ಟ್‌ನಲ್ಲಿ 24 ವಿಕೆಟ್ ಪಡೆದರೆ, ಏಕದಿನ ಕ್ರಿಕೆಟ್‌ನಲ್ಲಿ 37 ವಿಕೆಟ್ ಕಬಳಿಸಿದ್ದಾರೆ.   203 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಕಾರ್ತಿಕ್ ಒಟ್ಟು 644 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಇಂಗ್ಲೆಂಡ್ ಕೌಂಟಿ ತಂಡಗಳಾದ ಮಿಡ್ಲ್‌ಸೆಕ್ಸ್, ಸರ್ರೆ ಹಾಗೂ ಸಮರ್‌ಸೆಟ್ ತಂಡಗಳ ಪರ ಆಡಿದ ಪಂದ್ಯಗಳಲ್ಲಿ ಪಡೆದ ವಿಕೆಟ್‌ಗಳೂ ಇದರಲ್ಲಿ ಸೇರಿವೆ.
'ನಾನು ಎಲ್ಲ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಹೇಳಬಯಸುತ್ತೇನೆ. ಈ ವರ್ಷ ಐಪಿಎಲ್ ಪಂದ್ಯಾವಳಿಯಲ್ಲಿ ನಾನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪ್ರತಿನಿಧಿಸಿದ್ದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ' ಎಂದು ಪತ್ರಿಕಾಗೋಷ್ಠಿಯಲ್ಲಿ  ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.