ಆಂಗ್ಲರ ಬೌಲಿಂಗ್ ಆರ್ಭಟ
ಲೀಡ್ಸ್: ವೇಗದ ಬೌಲರ್ಗಳ ಮಾರಕ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ, ಶ್ರೀಲಂಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಗೌರವ ಸಂಪಾದಿಸಿದೆ.
ಶನಿವಾರ ಇಲ್ಲಿನ ಹೆಡಿಂಗ್ಲಿ ಕ್ರೀಡಾಂಗಣದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಶ್ರೀಲಂಕಾ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ 257 ರನ್ಗಳಿಗೆ ಕಟ್ಟಿ ಹಾಕಿದ ಇಂಗ್ಲೆಂಡ್, ದಿನದಾಟ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ 36 ರನ್ ದಾಖಲಿಸಿದೆ.
ವೇಗ ಹಾಗೂ ಪುಟಿತಕ್ಕೆ ನೆರವಾಗುವ ಪಿಚ್ನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ಬ್ಯಾಟ್ಸ್ಮನ್ಗಳಿಗೆ ರನ್ಗಳಿಸುವುದು ಕಠಿಣ ಸವಾಲಾಗಿ ಪರಿಣಮಿಸಿತ್ತು. ಪರಿಣಾಮ ಕುಮಾರ ಸಂಗಕ್ಕಾರ (79) ಅರ್ಧಶತಕ ಹಾಗೂ ದಿನೇಶ್ ಚಂಡಿಮಲ್ (45) ಹೊರತು ಪಡಿಸಿ ಉಳಿದ ಯಾವುದೇ ಬ್ಯಾಟ್ಸ್ಮನ್ ಗೌರವ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ.
ಇನ್ನು ಇಂಗ್ಲೆಂಡ್ ತಂಡದ ಪರ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ಲಿಯಾಮ್ ಪ್ಲಂಕೆಟ್ 64 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಸ್ಟುವರ್ಟ್ ಬ್ರಾಡ್ 46 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದರು.
ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಎರಡು ಬಾರಿ ಹ್ಯಾಟ್ರಿಕ್ ಸಾಧನೆ ಮಾಡಿದ ನಾಲ್ಕನೇ ಬೌಲರ್ ಎನಿಸಿದರು. ಈ ಹಿಂದೆ ಹೈ ತೂಂಬ್ಳೆ, ಜಿಮ್ಮಿ ಮ್ಯಾಥ್ಯೂಸ್ ಹಾಗೂ ವಾಸಿಮ್ ಅಕ್ರಮ್ ಈ ಸಾಧನೆ ಮಾಡಿದ ಆಟಗಾರ ಎನಿಸಿದ್ದರು.
ಲಂಕಾ ತಂಡವನ್ನು ಆಲೌಟ್ ಮಾಡಿ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 36 ರನ್ ದಾಖಲಿಸಿದೆ. ಆರಂಭಿಕರಾಗಿ ಕಣಕ್ಕಿಳಿದಿರುವ ನಾಯಕ ಅಲಸ್ಟೇರ್ ಕುಕ್ 14 ಹಾಗೂ ಸ್ಯಾಮ್ ರಾಬ್ಸನ್ 21 ರನ್ ಗಳಿಸಿ ಅಜೇಯರಾಗುಳಿದು, ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
ಸಂಕ್ಷಿಪ್ತ ಸ್ಕೋರ್:
ಶ್ರೀಲಂಕಾ ಮೊದಲ ಇನಿಂಗ್ಸ್ 257
ಕುಮಾರ ಸಂಗಕ್ಕಾರ 79, ಚಂಡಿಮಲ್ 45, ಪ್ಲಂಕೆಟ್ 64ಕ್ಕೆ5
ಇಂಗ್ಲೆಂಡ್ ಮೊದಲ ಇನಿಂಗ್ಸ್ ವಿಕೆಟ್ ನಷ್ಟವಿಲ್ಲದೆ 36
ಸ್ಯಾಮ್ ರಾಬ್ಸನ್ ಅಜೇಯ 21, ಅಲಸ್ಟೇರ್ ಕುಕ್ ಅಜೇಯ 14
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

