ಕ್ರೀಡೆ

ಇಂದಿನಿಂದ ಆಸ್ಟ್ರೇಲಿಯಾ ಓಪನ್

Published On :

ಸಿಡ್ನಿ: ಇತ್ತೀಚಿನ ದಿನಗಳಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿರುವ ಭಾರತದ ಬ್ಯಾಡ್ಮಿಂಟನ್ ತಾರೆಗಳು, ಇಂದಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಓಪನ್ ಪಂದ್ಯಾವಳಿಯಲ್ಲಿ ತಮ್ಮ ಅಭಿಯಾನ ಆರಂಭಿಸಲಿದ್ದಾರೆ.
ಭಾರತ ತಂಡದ ನೇತೃತ್ವ ವಹಿಸಿರುವ ಸೈನಾ ನೆಹ್ವಾಲ್, ಕಳೆದ ಒಂದುವರೆ ವರ್ಷದಿಂದ ತಮ್ಮ ಲಯ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಅವಧಿಯಲ್ಲಿ ಸೈನಾ ಕಳೆದ ಜನವರಿಯಲ್ಲಿ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಮಾತ್ರ ಗೆದ್ದಿದ್ದಾರೆ. ಉಳಿದಂತೆ ಉಬೇರ್ ಕಪ್ ಪಂದ್ಯಾವಳಿಯಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದ ಸೈನಾ ಭಾರತ ಕಂಚಿನ ಪದಕ ಪಡೆಯುವಲ್ಲಿ ನೆರವಾಗಿದ್ದರು. ಈ ಎರಡು ಪಂದ್ಯಾವಳಿ ಹೊರತು ಪಡಿಸಿದರೆ, ಸೈನಾ ಪ್ರದರ್ಶನ ನೀರಸವಾಗಿದೆ. ಹಾಗಾಗಿ ಈ ಪಂದ್ಯಾವಳಿಯಲ್ಲಾದರೂ ಸೈನಾ ತಮ್ಮ ಹಿಂದಿನ ಲಯ ಕಂಡುಕೊಳ್ಳುವರೇ ಎಂಬುದನ್ನು ಕಾದುನೋಡಬೇಕು. ಉಳಿದಂತೆ ಪಿ.ವಿ ಸಿಂಧು, ಪಿ.ಸಿ ತುಳಸಿ ಸಹ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದಾರೆ.
ಸೈನಾ ನೆಹ್ವಾಲ್ ಪಂದ್ಯಾವಳಿಯಲ್ಲಿ ಆರನೇ ಶ್ರೇಯಾಂಕ ಪಡೆದಿದ್ದು, ಸೈನಾ ತಮ್ಮ ಮೊದಲ ಪಂದ್ಯದಲ್ಲಿ ಪ್ರಬಲ ಆಟಗಾರ್ತಿ ಚೀನಾದ ಸನ್ ಯೂ ವಿರುದ್ಧ ಕಾದಾಟ ನಡೆಸಲಿದ್ದಾರೆ. ಇನ್ನು ಎಂಟನೇ ಶ್ರೇಯಾಂಕ ಪಡೆದಿರುವ ಸಿಂಧು ತಮ್ಮ ಮೊದಲ ಪಂದ್ಯದಲ್ಲಿ ಜಪಾನ್‌ನ ಅಯಾ ಒಹೊರಿ ವಿರುದ್ಧ ಹಾಗೂ ತುಳಸಿ ಮಲೇಷ್ಯಾದ ಜೇಮಿ ಸುಬಾಂಧಿ ವಿರುದ್ಧ ಕಾದಾಟ ನಡೆಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.