ಕ್ರೀಡೆ

ಆಂಗ್ಲರ ನಾಡಲ್ಲಿ ಟೀಂ ಇಂಡಿಯಾಗೆ ವಾಲ್ ಆಸರೆ

ಆಂಗ್ಲರ ನಾಡಲ್ಲಿ ಟೀಂ ಇಂಡಿಯಾಗೆ ವಾಲ್ ಆಸರೆ
Published On :

ನವದೆಹಲಿ: ಭಾರತ ಕ್ರಿಕೆಟ್‌ನ ಮಹಾ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಬ್ಯಾಟಿಂಗ್ ಸಲಹೆಗಾರನಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಭಾರತ ತಂಡದ ಆಡಳಿತ ಮಂಡಳಿ ರಾಹುಲ್ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನಾಗಿ ನೇಮಕ ಮಾಡಬೇಕೆಂದು ಬಿಸಿಸಿಐಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಸಂಜಯ್ ಪಟೇಲ್ ತಿಳಿಸಿದ್ದಾರೆ.
ದ್ರಾವಿಡ್ ಸೋಮವಾರದ ವೇಳೆಗೆ ಭಾರತ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆ ಇದೆ. ದ್ರಾವಿಡ್ ಜು.9ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ನಡೆಯಲಿರುವ ಅಭ್ಯಾಸ ಪಂದ್ಯ ಹಾಗೂ ಶಿಬಿರದ ವೇಳೆ ಟೀಂ ಇಂಡಿಯಾ ಜತೆಗೆ ಕಾರ್ಯ ನಿರ್ವಹಿಸಲಿದ್ದಾರೆ.   ಕೋಚ್ ಡಂಕನ್ ಪ್ಲೆಚರ್ ತಂಡದ ಪರವಾಗಿ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿ ಆರಂಭವಾಗುವ ಮುನ್ನ ಅಗಾಧ ಅನುಭವವನ್ನು ಹೊಂದಿರುವ ರಾಹುಲ್ ದ್ರಾವಿಡ್, ಆಟಗಾರರ ಅಭ್ಯಾಸದ ವೇಳೆ ಜತೆಗಿರುವುದು ಪ್ರಮುಖ ಅಂಶವಾಗಲಿದೆ ಎಂದು ಫ್ಲೆಚರ್ ತಿಳಿಸಿದ್ದಾಗಿ ಪಟೇಲ್ ಮಾಹಿತಿ ನೀಡಿದ್ದಾರೆ.    ನಂತರ ನಾವು ತಕ್ಷಣವೇ ದ್ರಾವಿಡ್ ಅವರ ಬಳಿ ಈ ಬಗ್ಗೆ ಚರ್ಚಿಸಿದೆವು. ದ್ರಾವಿಡ್ ಸಹ ಅದಕ್ಕೆ ಉತ್ತಮ ರೀತಿಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಪಟೇಲ್ ತಿಳಿಸಿದರು.   ಈ ಮೂಲಕ ದ್ರಾವಿಡ್ ಮೊದಲ ಬಾರಿಗೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಾಷ್ಟ್ರೀಯ ತಂಡಕ್ಕೆ ಸಲಹೆಗಾರರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.