ಕ್ರೀಡೆ

2015-16ರಲ್ಲಿ ಹೊನಲು ಬೆಳಕಿನ ಟೆಸ್ಟ್‌ಗಳ ಆರಂಭ?

2015-16ರಲ್ಲಿ ಹೊನಲು ಬೆಳಕಿನ ಟೆಸ್ಟ್‌ಗಳ ಆರಂಭ?
Published On :

ಮೆಲ್ಬೊರ್ನ್: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹಲವು ಬಾರಿ ಪ್ರಯೋಗಗಳು ಹಾಗೂ ಹಲವಾರು ಆಟಗಾರರ ಸಲಹೆ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಿಂಕ್ ಚೆಂಡನ್ನು ಬಳಸುವ ಮೂಲಕ ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಸಲು ನಿರ್ಧರಿಸಲಾಗಿದೆ.
ಈ ಪಂದ್ಯವನ್ನು ಛ2015ರ ನವೆಂಬರ್‌ನಲ್ಲಿ ನಡೆಸಲು ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿಗಳು ಚಿಂತನೆ ನಡೆಸುತ್ತಿವೆ.
ಕಳೆದವಾರ ನಡೆದ ಐಸಿಸಿ ವಾರ್ಷಿಕ ಸಭೆಯ ವೇಳೆ ಕ್ರಿಕೆಟ್ ಆಸ್ಟ್ರೇಲಿಯಾದ ಸಿಇಒ ಜೇಮ್ಸ್ ಸದರ್‌ಲ್ಯಾಂಡ್ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್‌ನ ಸಿಇಒ ಡೇವಿಡ್ ವೈಟ್ ಭೇಟಿ ಮಾಡಿದ್ದು, 2015-16ನೇ ಸಾಲಿನಲ್ಲಿ ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಸುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.
2015ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ತಂಡ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದು, ಈ ಸರಣಿಯಲ್ಲಿ ಈ ಐತಿಹಾಸಿಕ ಟೆಸ್ಟ್ ಪಂದ್ಯ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
2012ರಲ್ಲೇ ಐಸಿಸಿ, ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಒಪ್ಪಿಗೆ ನೀಡಿದ್ದು ಪಿಂಕ್ ಚೆಂಡು ಬಳಸುವ ಬಗ್ಗೆ ಸಹ ಸದಸ್ಯ ಸಂಸ್ಥೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಲು ಸೂಚಿಸಿತ್ತು. ಅಲ್ಲದೆ ಕಳೆದ ಋತುವಿನಲ್ಲಿ ಶಫೀಲ್ಡ್ ಶೀಲ್ಡ್ ಪಂದ್ಯಾವಳಿಯಲ್ಲಿ ಈ ಹೊನಲು ಬೆಳಕಿನ ಪಂದ್ಯದ ಪ್ರಯೋಗ ನಡೆಸಲಾಗಿತ್ತು. ಈ ಹೊಸ ಪರಿಕಲ್ಪನೆ ಹೆಚ್ಚು ನಿರೀಕ್ಷೆ ಮೂಡಿಸಿದ್ದು, ಉತ್ತಮ ಫಲಿತಾಂಶದ ಭರವಸೆ ಹೊಂದಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.