ಕ್ರೀಡೆ

ಬಾಂಗ್ಲಾಗೆ ಆಫ್ಘಾನ್ ಶಾಕ್

Published On :

ಫಾತುಲ್ಹಾ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮೊಹಮದ್ ಅಸ್ಘರ್ ಸ್ಟಾನಿಕ್ಜೈ(ಅಜೇಯ 90) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಆಫ್ಘಾನಿಸ್ತಾನ ಏಷ್ಯಾಕಪ್ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ವಿರುದ್ಧ ಗೆಲವು ದಾಖಲಿಸಿದೆ.
ಶನಿವಾರ ಖಾನ್ ಸಾಹೇಬ್ ಒಸ್ಮಾನ್ ಅಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನವು 50 ಓವರ್‌ಗಳಲ್ಲಿ 6 ವಿಕೆಟ್‌ಗೆ 244 ರನ್ ಪೇರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾ 47.5 ಓವರ್‌ಗಳಲ್ಲಿ 222 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದೇ ಮೊದಲ ಬಾರಿಗೆ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಅಫ್ಘಾನಿಸ್ತಾನ ತಂಡ, ದುರ್ಬಲ ತಂಡವಾಗಿದ್ದರೂ ಎದುರಾಳಿ ತಂಡಗಳಿಗೆ ಪ್ರಬಲ ಪೈಪೋಟಿ ನೀಡುವುದನ್ನು ಮುಂದುವರಿಸಿದೆ.
ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಈ ಮೂಲಕ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಅಫ್ಘಾನಿಸ್ತಾನ ಅಗ್ರ ಕ್ರಮಾಂಕದಿಂದ ಉತ್ತಮ ಆರಂಭ ಪಡೆಯಲಿಲ್ಲ. 90ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಬಂದ ಅಸ್ಘರ್ ಸ್ಟಾನಿಕ್ಜೈ (ಅಜೇಯ 90, 103 ಎಸೆತ, 6 ಬೌಂಡರಿ, 3 ಸಿಕ್ಸರ್) ತಂಡವನ್ನು ಮೇಲೆತ್ತಿದರು. ಇವರಿಗೆ ಉತ್ತಮ ಸಾಥ್ ನೀಡಿದ ಸಮೀವುಲ್ಲಾ ಶೆನ್ವಾರಿ (81 ರನ್, 69 ಎಸೆತ, 10 ಬೌಂಡರಿ, 1 ಸಿಕ್ಸರ್) ಸಹ ತಂಡ ಉತ್ತಮ ಮೊತ್ತ ಪೇರಿಸಲು ನೆರವಾದರು.
ಇನ್ನು ಬಾಂಗ್ಲಾದೇಶ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಮೊಮಿನುಲ್(50) ಅರ್ಧಶತಕ ಹಾಗೂ ಜಿಯುರ್ ರೆಹಮಾನ್ ಅವರ ಚುಟುಕಿನ ಬ್ಯಾಟಿಂಗ್‌ನಿಂದ ಗೆಲವಿನ ದಡ ಸೇರಲು ಪ್ರಯತ್ನಿಸಿತಾದರೂ ಸಾಧ್ಯವಾಗಲಿಲ್ಲ.
ಸಂಕ್ಷಿಪ್ತ ಸ್ಕೋರ್
ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 244
ಅಸ್ಘರ್ ಸ್ಟಾನಿಕ್ಜೈ ಅಜೇಯ 90, ಸಮೀವುಲ್ಲಾ 81, ಅರಾಫತ್ ಸನ್ನಿ 44ಕ್ಕೆ2      ಬಾಂಗ್ಲಾದೇಶ 47.5 ಓವರ್‌ಗಳಲ್ಲಿ 222
ಮೊಮಿನುಲ್ ಹಕ್ 50, ಜಿಯುರ್ ರೆಹಮಾನ್ 41, ಮೊಹಮದ್ ನಬಿ 44ಕ್ಕೆ3  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.