ಫೈನಲ್‌ಗೆ ಲಂಕಾ ಲಗ್ಗೆ
ಮೀರ್‌ಪುರ: ಗೆಲವಿನ ಓಟ ಮುಂದುವರಿಸಿರುವ ಶ್ರೀಲಂಕಾ ತಂಡವು ಏಷ್ಯಾಕಪ್ ಪಂದ್ಯಾವಳಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲವು ದಾಖಲಿಸಿದೆ.
ಈ ಮೂಲಕ ಶ್ರೀಲಂಕಾ ತಂಡ ಪಂದ್ಯಾವಳಿಯ ಫೈನಲ್‌ಗೆ ಲಗ್ಗೆ ಹಾಕಿದೆ.
ಸೋಮವಾರ ಇಲ್ಲಿನ ಶೇರ್‌ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನ ವಿರುದ್ಧ 129 ರನ್‌ಗಳ ಭರ್ಜರಿ ಗೆಲವು ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 253 ರನ್ ದಾಖಲಿಸಿತು. ಈ ಮೊತ್ತವನ್ನು ಬೆಂಬತ್ತಿದ ಅಫ್ಘಾನಿಸ್ತಾನ 38.4 ಓವರ್‌ಗಳಲ್ಲಿ 124 ರನ್‌ಗಳಿಗೆ ತನ್ನ ಇನಿಂಗ್ಸ್‌ಗೆ ತೆರೆ ಎಳೆದುಕೊಂಡಿತು.
ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ ತಂಡಕ್ಕೆ ಸಂಗಕ್ಕಾರ(76) ಮತ್ತು ಆ್ಯಂಜಲೊ ಮ್ಯಾಥ್ಯೂಸ್ (ಅಜೇಯ 45) ನೆರವಾಗಿ ನಿಂತರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ 250ರ ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸಿತು.
ಈ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ತಾನದ ಹೋರಾಟಕ್ಕೆ ಮೊಹಮದ್ ನಬಿ(37) ಹಾಗೂ ಅಸ್ಘರ್(27) ಜೀವ ತುಂಬುವ ಪ್ರಯತ್ನ ನಡೆಸಿದರಾದರು, ತಂಡವನ್ನು ಗೆಲವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಇವರಿಗೆ ಇತರೆ ಆಟಗಾರರಿಂದ ಬೆಂಬಲ ಸಿಗದ ಹಿನ್ನಲೆಯಲ್ಲಿ ತಂಡ ಅಲ್ಪಮೊತ್ತಕ್ಕೆ ಆಲೌಟ್ ಆಯಿತು.
ಶ್ರೀಲಂಕಾ ತಂಡದ ಪರ ಅರ್ಧಶತಕ ದಾಖಲಿಸಿದ ಸಂಗಕ್ಕಾರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್:
ಶ್ರೀಲಂಕಾ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 253
ಸಂಗಕ್ಕಾರ 76, ಮ್ಯಾಥ್ಯೂಸ್ ಅಜೇಯ 45, ಅಶ್ರಫ್ 29ಕ್ಕೆ2ಅಫ್ಘಾನಿಸ್ತಾನ 38.4 ಓವರ್‌ಗಳಲ್ಲಿ 124
ಮೊಹಮದ್ ನಬಿ 37, ಅಸ್ಘರ್ 27, ಅಜಂತಾ ಮೆಂಡಿಸ್ 11ಕ್ಕೆ3
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

