ಕ್ರೀಡೆ

ಇಂದು ಸಂತೋಷ್ ಟ್ರೋಫಿ ಸೆಮಿಫೈನಲ್

Published On :

ಸಿಲಿಗುರಿ: ಗೆಲವಿನ ಅಲೆಯಲ್ಲಿ ತೇಲುತ್ತಿರುವ ಮಿಜೋರಾಮ್ ತಂಡ ತಮಿಳುನಾಡು ವಿರುದ್ಧ ಹಾಗೂ ರೈಲ್ವೇಸ್ ತಂಡ ಮಹಾರಾಷ್ಟ್ರ ವಿರುದ್ಧ 68ನೇ ಸಂತೋಷ್ ಟ್ರೋಫಿ ಫುಟ್ಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಕಾದಾಟ ನಡೆಸುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಶುಕ್ರವಾರ ಕಂಚೆಂಜುಂಗಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಸುತ್ತಿನ ಮೊದಲ ಪಂದ್ಯದಲ್ಲಿ ಮಿಜೋರಾಮ್ ತಂಡ ತಮಿಳುನಾಡು ವಿರುದ್ಧ ಗೆಲವು ಸಾಧಿಸಲು ಸಿದ್ಧತೆ ನಡೆಸಿದೆ. ಸತತ ಏಳು ಪಂದ್ಯಗಳಲ್ಲಿ ಗೆದ್ದು ಬೀಗಿರುವ ಮಿಜೋರಾಮ್, ಗೆಲ್ಲುವ ಫೆವರಿಟ್ ತಂಡವಾಗಿದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ರೈಲ್ವೇಸ್ ತಂಡ ಮಹಾರಾಷ್ಟ್ರ ತಂಡದ ಸವಾಲು ಸ್ವೀಕರಿಸಲು ಸಜ್ಜಾಗಿದೆ. ಮಿಜೋರಾಮ್ ತಂಡ ಗೆಲವಿನ ಹಾದಿಯಲ್ಲಿ ಸಾಗುತ್ತಿದ್ದು, ಸ್ಥಿರ ಪ್ರದರ್ಶನ ನೀಡುತ್ತಿರುವುದು ತಂಡದ ಪ್ರಬಲ ಅಂಶವಾಗಿದೆ. ಆದರೆ ತಮಿಳುನಾಡು ಪಂದ್ಯಾವಳಿಯಲ್ಲಿ ಹಲವು ಏಳು ಬೀಳುಗಳನ್ನು ಕಂಡಿದೆ.  ಇನ್ನು ಮಹಾರಾಷ್ಟ್ರ ತಂಡದ ಮಿಡ್‌ಫೀಲ್ಡ್ ವಿಭಾಗ ತಂಡದ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ. ಪ್ರನೀಲ್ ಮೆಂಡನ್, ವಿಜಿತ್ ಶೆಟ್ಟಿ, ಶಹಬಾಜ್ ಪಠಾಣ್ ಪ್ರಮುಖ ಅಸ್ತ್ರವಾಗಿದ್ದಾರೆ. ಅಲ್ಲದೆ ಅನುಭವಿಗಳಿಂದ ಕೂಡಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.