ಸ್ಯಾಫ್ ಬಗ್ಗೆ ಐಒಎ ಚರ್ಚೆ
ನವದೆಹಲಿ: ಮುಂಬರುವ ದಕ್ಷಿಣ ಏಷ್ಯನ್ ಫೆಡರೇಷನ್ ಕ್ರೀಡಾಕೂಟ ಹಾಗೂ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸುವ ದಿನಾಂಕದ ಕುರಿತ ನಿರ್ಧಾರವನ್ನು ತನ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲು ಐಒಎ ನಿರ್ಧರಿಸಿದೆ.
ಮಾ.27ರಂದು ಭಾರತೀಯ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದ್ದು, ಈ ವೇಳೆ ಈ ಎರಡು ಪ್ರಮುಖ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಐಒಎ 2012ರಲ್ಲೇ ಸ್ಯಾಫ್ ಕ್ರೀಡಾಕೂಟವನ್ನು ಆಯೋಜಿಸುವ ಪ್ರಸ್ತಾವ ಹೊಂದಿತ್ತು. ಆದರೆ ದೆಹಲಿ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ಪಂದ್ಯಾವಳಿಯನ್ನು ಮುಂದೂಡಿತ್ತು. ನಂತರ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಐಒಎ ಮೇಲೆ ನಿಷೇಧ ಹೇರಿದ ಪರಿಣಾಮ ಈ ಪಂದ್ಯಾವಳಿ ಆಯೋಜನೆ ಸಾಧ್ಯವಾಗಿರಲಿಲ್ಲ. ಇನ್ನು 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಛತ್ತೀಸ್ಗಡದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕ ನಿಗದಿ ಮಾಡಬೇಕಾಗಿದೆ. ಅಲ್ಲದೆ ಈ ಸಭೆಯಲ್ಲಿ ಮುಂಬರುವ ಕಾಮನ್ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತೀಯ ಅಥ್ಲೀಟ್ಗಳ ತಯಾರಿ ಕುರಿತು ಸಹ ಚರ್ಚೆ ನಡೆಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

