ವೆಸ್ಟ್ ಇಂಡೀಸ್ ಪ್ರಶಸ್ತಿ ಉಳಿಸಿ ಕೊಳ್ಳುವುದು ಕಷ್ಟ: ಕ್ರಿಸ್ ಗೇಯ್ಲ್

ಬ್ರಿಡ್ಜ್ಟೌನ್: ಹಾಲಿ ವಿಶ್ವ ಟಿ20 ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಪ್ರಶಸ್ತಿ ಉಳಿಸಿಕೊಳ್ಳುವುದು ಕಷ್ಟದಾಯಕ. ಆದರೆ, ಪಂದ್ಯಾವಳಿಯಲ್ಲಿ ತಂಡ ಪ್ರಬಲ ಹೋರಾಟ ನಡೆಸಲಿದೆ ಎಂದು ವಿಂಡೀಸ್ನ ಸ್ಫೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಯ್ಲ್ ಅಭಿಪ್ರಾಯಪಟ್ಟಿದ್ದಾರೆ.
ಎರಡು ವರ್ಷಗಳ ಹಿಂದೆ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆದಾಗ ವಿಂಡೀಸ್ ತಂಡದ ಪರ ಪ್ರಮುಖ ಪಾತ್ರ ವಹಿಸಿದ್ದ ಗೇಯ್ಲ್, ಇದೇ ಮಾರ್ಚ್ 16ರಿಂದ ಏಪ್ರಿಲ್ 6ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲೂ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿವೆ. 'ಇತಿಹಾಸ ಮರುಕಳಿಸಿದರೆ ಅದಕ್ಕಿಂತ ಸಂತಸ ಮತ್ತೊಂದಿಲ್ಲ. ಆದರೆ, ಇತರ ತಂಡಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ನಾವು ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭ ಸಾಧ್ಯವಿಲ್ಲ. ಅಲ್ಲದೆ, ಇತರ ತಂಡಗಳ ಆಟಗಾರರು ಉತ್ತಮ ಫಾರ್ಮ್ನಲ್ಲಿದ್ದಾರೆ. ಲೀಗ್ ಹಂತದಲ್ಲಿ ಸೂಕ್ತ ಪ್ರದರ್ಶನ ನೀಡುವುದು ತುಂಬಾ ಮಹತ್ವದ್ದಾಗಿದೆ. ಹೀಗಾಗಿ ಲೀಗ್ ಹಂತದಲ್ಲಿ ಯಶಸ್ವಿ ಪ್ರದರ್ಶನ ನೀಡುವುದು ನಮ್ಮ ಪ್ರಮುಖ ಗುರಿ. ನಂತರ ಸೆಮಿಫೈನಲ್ ಮತ್ತು ಫೈನಲ್ ಕುರಿತು ಚಿಂತನೆ ನಡೆಸುತ್ತೇವೆ' ಎಂದಿದ್ದಾರೆ.ಟಿ20 ವಿಶ್ವಕಪ್ ಗೆದ್ದಾಗಿನಿಂದ ಇದುವರೆಗೂ ವೆಸ್ಟ್ ಇಂಡೀಸ್ ತಂಡ ಒಟ್ಟು 10 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದೆ. ಆದರೆ, ಅದರಲ್ಲಿ 5ರಲ್ಲಿ ಮಾತ್ರ ಜಯ ಸಾಧಿಸಿದೆ. ಅಲ್ಲದೆ, ವೆಸ್ಟ್ ಇಂಡೀಸ್ ತಂಡ ಭಾರತ, ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನದಂತಹ ಬಲಿಷ್ಠ ತಂಡಗಳಿರುವ ಗುಂಪಿನಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


