ಏಕದಿನ ತಂಡಕ್ಕೆ ಮರಳಲು ನೆಟ್ಸ್ನಲ್ಲಿ ಪೂಜಾರ ಬೌಲಿಂಗ್
ನವದೆಹಲಿ: ಭಾರತೀಯ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಪ್ರಯತಿ ಸುತ್ತಿರುವ ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ, ನೆಟ್ಸ್ನಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಅಲ್ಲದೆ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಮುಂದಿನ ವಿಶ್ವಕಪ್ಗೆ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಸಹ ನೆಟ್ಸ್ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದೇನೆ. ಈ ಮೂಲಕ ತಂಡದಲ್ಲಿ ಅರೆಕಾಲಿಕ ಬೌಲರ್ ಆಗಿ ತಂಡಕ್ಕೆ ಕಾಣಿಕೆ ನೀಡಲು ನೆರವಾಗಲಿದೆ. ತಂಡದ ನಾಯಕ ನನ್ನನ್ನು ಅರೆಕಾಲಿಕ ಬೌಲರ್ ಆಗಿ ಬಳಸಲು ನಿಧಂರಿಸಿದರೆ, ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಇಚ್ಛಿಸುತ್ತೇನೆ. ಅಲ್ಲದೆ ನನ್ನ ಆಟವನ್ನು ಮತ್ತಷ್ಟು ವೃದ್ಧಿಸಿಕೊಳ್ಳುತ್ತಿದ್ದೇನೆ. ಬ್ಯಾಟಿಂಗ್ನಲ್ಲಿನ ತಪ್ಪುಗಳನ್ನು ಬಗೆಹರಿಸಿಕೊಳ್ಳುತ್ತಿದ್ದೇನೆ. ಇದು ಸುದೀರ್ಘವಧಿಯವರೆಗೆ ನೆರವಾಗಲಿದೆ ಎಂದು ಪೂಜಾರ ತಿಳಿಸಿದ್ದಾರೆ.
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನದ ಮೂಲಕ ನನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಲು ಕಾಯುತ್ತಿದ್ದೇನೆ. ಏಕದಿನ ಮಾದರಿಯಲ್ಲೂ ನಾನು ಯಶಸ್ಸು ಸಾಧಿಸುವ ವಿಶ್ವಾಸವಿದೆ. ನಾನು ಆರ್ಸಿಬಿ ಪರ ಒಂದೆರಡು ಉತ್ತಮ ಇನಿಂಗ್ಸ್ ಆಡಿದ್ದೆ. ನಾನು ಸೀಮಿತ ಓವರ್ಗಳಲ್ಲಿ ಹೆಚ್ಚು ಅವಕಾಶ ಪಡೆದರೆ, ಉತ್ತಮ ಪ್ರದರ್ಶನ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

