ಚುನಾವಣೆ ನಂತರ ಐಪಿಎಲ್‌ಗೆ ಸರ್ಕಾರ ಅಸ್ತು
ನವದೆಹಲಿ: ಲೋಕಸಭೆ ಚುನಾವಣೆಯ ನಂತರ ಭಾರತದಲ್ಲಿ ಐಪಿಎಲ್ ಪಂದ್ಯಗಳಿಗೆ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ಬಿಸಿಸಿಐಗೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.
ಚುನಾವಣೆ ನಂತರ ಐಪಿಎಲ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಯಾವುದೇ ಅಡ್ಡಿ ಇಲ್ಲ. ಆದರೆ ಪಂದ್ಯಗಳನ್ನು ಆಯೋಜಿಸುವಾಗ ಆಯಾ ರಾಜ್ಯಗಳ ಸರ್ಕಾರದ ಜತೆ ಮಾತುಕತೆ ನಡೆಸಬೇಕು ಎಂದು ಬಿಸಿಸಿಐಗೆ ಗೃಹ ಸಚಿವಾಲಯ ಸೂಚನೆ ನೀಡಿದೆ ಎಂಬ ಮಾಹಿತಿ ಬಂದಿದೆ.
ಲೋಕಸಭೆ ಚುನಾವಣೆ ಪ್ರಕ್ರಿಯೆ ಮೇ 16ಕ್ಕೆ ಮುಕ್ತಾಯಗೊಳ್ಳಲಿದ್ದು, ಅಲ್ಲಿಯವರೆಗೂ ಪಂದ್ಯಾವಳಿಯ ಆರಂಭಿಕ ಹಂತದ ಪಂದ್ಯಗಳನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದು. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಬಿಸಿಸಿಐ ಐಪಿಎಲ್‌ನ 60 ಪಂದ್ಯಗಳಲ್ಲಿ 44 ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಗೃಹ ಇಲಾಖೆ ಅವಕಾಶ ನೀಡಿದೆ. ಇನ್ನು ಆರಂಭಿಕ ಹಂತದ ಪಂದ್ಯಗಳನ್ನು ಬಾಂಗ್ಲಾದೇಶ ಆಯೋಜಿಸುವ ಸಾಧ್ಯತೆಗಳಿವೆ. ಆದರೆ ಭಾರತ ತಂಡ ಜೂನ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಲಿರುವ ಹಿನ್ನಲೆಯಲ್ಲಿ ಬಿಸಿಸಿಐ ಏ.9ರಿಂದ ಜೂ.3ರ ಒಳಗಾಗಿ ಐಪಿಎಲ್ ಪಂದ್ಯಾವಳಿಯನ್ನು ಮುಕ್ತಾಯಗೊಳಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

