ಕ್ರೀಡೆ

ಸಿಂಧು, ಕಶ್ಯಪ್‌ಗೆ ಸೋಲು; ಭಾರತದ ಸವಾಲು ಅಂತ್ಯ

Published On :

ಬಾಸೆಲ್: ಅಪಾರ ಭರವಸೆ ಮೂಡಿಸಿದ್ದ ಪಿ.ವಿ. ಸಿಂಧು ಮತ್ತು ಪರುಪಳ್ಳಿ ಕಶ್ಯಪ್ ಅವರು ಸ್ವಿಸ್ ಓಪನ್ ಗ್ರ್ಯಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯ ತಮ್ಮ ಸೆಮಿಫೈನಲ್ ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.
ಶನಿವಾರ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಏಳನೇ ಶ್ರೇಯಾಂಕಿತೆ ಪಿ.ವಿ. ಸಿಂಧು 21-18, 12-21, 19-21ರಿಂದ ಚೀನಾ ಸೂ ಯೂ ಎದುರು ಸೋಲನುಭವಿಸಿದರು.
ವಿಶ್ವದ 9ನೇ ಶ್ರೇಯಾಂಕಿತ ಆಟಗಾರ್ತಿ ಸಿಂಧು ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನೇ ನೀಡುತ್ತಿದ್ದರು. ಸೆಮಿಫೈನಲ್‌ನಲ್ಲಿ ಕೂಡ ಚೀನಾ ಆಟಗಾರ್ತಿಗೆ ಕಠಿಣ ಸವಾಲುಗಳನ್ನು ಒಡ್ಡುವ ಮೂಲಕ ಕೆಲವು ಬಾರಿ ಗೆಲ್ಲುವ ಅವಕಾಶವನ್ನು ಹೊಂದಿದ್ದರು. ಆದರೆ, ಹೈದರಾಬಾದ್ ಆಟಗಾರ್ತಿಗೆ ಜಯದ ಅದೃಷ್ಟ ಇರಲಿಲ್ಲ.
ಅದೇ ರೀತಿ ಪುರುಷರ ಸಿಂಗಲ್ಸ್ ನಾಲ್ಕರಘಟ್ಟದ ಸೆಣಸಿನಲ್ಲಿ ಕಶ್ಯಪ್, 17-21, 11-21 ನೇರ ಅಂಕಗಳಿಂದ ಚೀನಾದವರೇ ಆದ ಹೌವೇಯಿ ಟಿಯನ್ ವಿರುದ್ಧ ಆಘಾತ ಅನುಭವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.