ಭಾರತಕ್ಕೆ ಸ್ಪರ್ಧಾತ್ಮಕ ಗುರಿ
ಮೀರ್ಪುರ: ಹಿರಿಯ ಆಟಗಾರ ಮಹೇಲ ಜಯವರ್ದನೆ(30) ಹಾಗೂ ನುವಾನ್ ಕುಲಶೇಖರ(ಅಜೇಯ 18) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ತಂಡವು ಭಾರತಕ್ಕೆ ಸ್ಪರ್ಧಾತ್ಮಕ ಗುರಿಯನ್ನು ನೀಡಿದೆ.
ಸೋಮವಾರ ಇಲ್ಲಿನ ಶೇರೆ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ವಿರುದ್ಧ ಲಂಕಾ 153 ರನ್ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ.
ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ಗೆ ಇಳಿದ ಶ್ರೀಲಂಕಾ ತಂಡ 20 ಓವರ್ಗಳಲ್ಲಿ 6 ವಿಕೆಟ್ಗೆ 153 ರನ್ ದಾಖಲಿಸಿತು.
ಅಶ್ವಿನ್ಗೆ 3 ವಿಕೆಟ್: ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ಗೆ ಇಳಿಸುವ ನಾಯಕ ಧೋನಿಯ ನಿರ್ಧಾರವನ್ನು ಆರಂಭದಲ್ಲಿ ಬೌಲರ್ಗಳು ಸಮರ್ಥಿಸಿಕೊಂಡರು. ಆರಂಭಿಕರಾಗಿ ಕಣಕ್ಕಿಳಿದ ಕುಶಾಲ ಪೆರೇರಾ(21) ಹಾಗೂ ತಿಲಕರತ್ನೆ ದಿಲ್ಷಾನ್(9) ವಿಕೆಟ್ ಬೇಗನೆ ಕಬಳಿಸಿತು. ನಂತರ ಬಂದ ಕುಮಾರ ಸಂಗಕ್ಕಾರ(4) ಹಾಗೂ ಮ್ಯಾಥ್ಯೂಸ್(9) ಅವರನ್ನು ಬೇಗನೆ ಪೆವಿಲಿಯನ್ಗೆ ಕಳುಹಿಸಿದರು. ಆದರೆ ಜಯವರ್ದನೆ(30 ರನ್, 20 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ದಿನೇಶ್ ಚಂಡಿಮಲ್(29) ತಂಡವನ್ನು ಚೇತರಿಕೆಯತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದರು.
ಲಂಕಾ ತಂಡ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಕ್ರೀಸ್ಗೆ ಆಗಮಿಸಿದ ಆಲ್ರೌಂಡರ್ಗಳಾದ ತಿಸಾರ ಪೆರೇರಾ(ಅಜೇಯ 18 ರನ್, 11 ಎಸೆತ, 1 ಬೌಂಡರಿ, 1 ಸಿಕ್ಸರ್) ಹಾಗೂ ನುವಾನ್ ಕುಲಸೇಖರ(ಅಜೇಯ 21, 14 ಎಸೆತ, 1 ಬೌಂಡರಿ, 2 ಸಿಕ್ಸರ್) ತಂಡದ ಮೊತ್ತವನ್ನು 150ರನ್ ಗಡಿ ದಾಟುವಂತೆ ನೋಡಿಕೊಂಡರು. ಇನ್ನು ಭಾರತದ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಆರ್.ಅಶ್ವಿನ್ 4 ಓವರ್ಗಳಲ್ಲಿ 22 ರನ್ಗಳಿಗೆ 3 ವಿಕೆಟ್ ಪಡೆದರು. ಇನ್ನು ವರುಣ್ ಎರಾನ್, ಅಮಿತ್ ಮಿಶ್ರಾ, ಸುರೇಶ್ ರೈನಾ ತಲಾ 1 ವಿಕೆಟ್ ಕಬಳಿಸಿದರು.
ಸಂಕ್ಷಿಪ್ತ ಸ್ಕೋರ್
ಶ್ರೀಲಂಕಾ 20 ಓವರ್ಗಳಲ್ಲಿ 6 ವಿಕೆಟ್ಗೆ 153 (ಮಹೇಲ ಜಯವರ್ದನೆ 30, ಚಂಡಿಮಲ್ 29, ಕುಲಶೇಖರ್ ಅಜೇಯ 21, ಅಶ್ವಿನ್ 22ಕ್ಕೆ3)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

