ಕ್ರೀಡೆ

ಕಿವೀಸ್‌ಗೆ ಸೋತ ವನಿತೆಯರು

Published On :

ಸವರ್(ಬಾಂಗ್ಲಾದೇಶ): ಕಿವೀಸ್ ಬೌಲಿಂಗ್ ದಾಳಿಗೆ ಕುಸಿದ ಭಾರತ ವನಿತೆಯರ ತಂಡ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಅಭ್ಯಾಸ ಪಂದ್ಯದಲ್ಲಿ ಸೋಲನುಭವಿಸಿದೆ.
ಮಂಗಳವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 17 ರನ್‌ಗಳ ಅಂತರದಲ್ಲಿ ಮಣಿದಿದೆ. ಟಾಸ್ ಗೆದ್ದ ಮಿಥಾಲಿ ರಾಜ್ ಪಡೆ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು, ನಂತರ ನ್ಯೂಜಿಲೆಂಡ್ ತಂಡವನ್ನು 20 ಓವರ್‌ಗಳಲ್ಲಿ 138 ರನ್‌ಗಳಿಗೆ 8 ವಿಕೆಟ್ ಪಡೆದು ನಿಯಂತ್ರಿಸಿತು. ನಂತರ ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 121 ರನ್ ಗಳಿಸಲಷ್ಟೇ ಶಕ್ತವಾಯಿತು.
ಭಾರತ ತಂಡದ ಪರ ನಾಯಕಿ ಮಿಥಾಲಿ ರಾಜ್ (53) ಅರ್ಧಶತಕ ದಾಖಲಿಸಿದರಾದರೂ ರಿಟೈರ್ಡ್ ಹರ್ಟ್ ಆಗಿ ಹೊರ ನಡೆದಿದ್ದು ತಂಡಕ್ಕೆ ಪೆಟ್ಟಾಯಿತು.
ಸಂಕ್ಷಿಪ್ತ ಸ್ಕೋರ್
ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 121, ಕೇಟ್ ಪರ್ಕಿನ್ಸ್ 40, ಸಾರಾ ಮೆಗ್ಲಾಶನ್ 34, ಜುಲನ್ ಗೋಸ್ವಾಮಿ 15ಕ್ಕೆ3
ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 121
ಮಿಥಾಲಿ ರಾಜ್ 53, ಹರ್ಮನ್‌ಪ್ರೀತ್ 27, ಮೊರ್ನಾ 9ಕ್ಕೆ3

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.