ಬಾಂಗ್ಲಾಗೆ 127ರ ಗುರಿ
ಚಿತ್ತಗಾಂಗ್: ಸಂಘಟಿತ ಬೌಲಿಂಗ್ ದಾಳಿ ನಡೆಸುವಲ್ಲಿ ಯಶಸ್ವಿಯಾದ ಆತಿಥೇಯ ಬಾಂಗ್ಲಾದೇಶದ ಆಟಗಾರರು ಟಿ20 ವಿಶ್ವಕಪ್ ಪಂದ್ಯಾವಳಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ನಡೆದ ಎರಡನೇ ಅರ್ಹತಾ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳವನ್ನು 126ಗಳ ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ, ನೇಪಾಳ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿ 20 ಓವರ್ಗಳಲ್ಲಿ 126 ರನ್ಗಳಿಗೆ 5 ವಿಕೆಟ್ ಕಬಳಿಸುವ ಮೂಲಕ ಕಟ್ಟಿ ಹಾಕಿತು. ಈ ಮೂಲಕ ಬಾಂಗ್ಲಾದೇಶ ತಂಡ ತವರಿನ ಅಂಗಣದ ಲಾಭ ಪಡೆದು, ಸೂಪರ್ 10 ಹಾದಿಯಲ್ಲಿ ಸಾಗುವ ಪ್ರಯತ್ನ ನಡೆಸಿದೆ.
ಆರಂಭಿಕ ಕುಸಿತ: ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನೇಪಾಳಕ್ಕೆ ಉತ್ತಮ ಆರಂಭ ಸಿಗಲಿಲ್ಲ.
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸುಭಾಷ್ ಕಾಕುರೆಲ್ ಹಾಗೂ ಸಾಗರ್ ಪುನ್ ಕೇವಲ 19 ರನ್ಗಳ ಅರಂಭ ನೀಡಿದರು. ಕಾಕುರಲ್ ಕೇವಲ 8 ರನ್ ಗಳಿಸಿ ಫರ್ಹಾದ್ ರೀಜಾ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ ಸಾಗರ್ 12 ರನ್ ಗಳಿಸಿ ಅಲ್ ಅಮೀನ್ ಹುಸೇನ್ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬಂದ ಜ್ಞಾನೇಂದ್ರ ಮಲ್ಲಾ 13 ರನ್ ದಾಖಲಿಸಿ ಅಲ್ ಅಮೀನ್ ಹೊಸೈನ್ ಎಲ್ಬಿ ಬಲೆಗೆ ಬಿದ್ದರು.
ಈ ಮೂಲಕ ನೇಪಾಳ ತಂಡ 39 ರನ್ ಆಗುವಷ್ಟರಲ್ಲೇ ಆರಂಭಿಕ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಆಸರೆಯಾದ ಜತೆಯಾಟ: ಆರಂಭಿಕ ಬ್ಯಾಟ್ಸ್ಮನ್ಗಳು ಸತತವಾಗಿ ವಿಕೆಟ್ ಕೈಚೆಲ್ಲಿದ ಪರಿಣಾಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ಮೇಲೆ ಹೆಚ್ಚಿನ ಒತ್ತಡ ಬಿತ್ತು. ಈ ವೇಳೆ ನಾಲ್ಕನೇ ವಿಕೆಟ್ಗೆ ಜತೆಯಾದ ಪಾರಸ್ ಖಡ್ಕಾ ಹಾಗೂ ಶರದ್ ವೇಸವ್ಕರ್ 85 ರನ್ಗಳ ಜತೆಯಾಟ ನೀಡುವ ಮೂಲಕ ತಂಡವನ್ನು ಮೇಲೆತ್ತುವ ಪ್ರಯತ್ನ ನಡೆಸಿದರು.
ಪಾರಸ್ (41 ರನ್, 35 ಎಸೆತ, 5 ಬೌಂಡರಿ) ಹಾಗೂ ಶರದ್ (40 ರನ್, 43 ಎಸೆತ, 5 ಬೌಂಡರಿ) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡದ ಮೊತ್ತವನ್ನು 120ರ ರನ್ ಗಡಿ ದಾಟುವಂತೆ ನೋಡಿಕೊಂಡರು.
ಇನ್ನು ಬಾಂಗ್ಲಾದೇಶದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಅಲ್ ಅಮೀನ್ ಹುಸೇನ್ 2 ವಿಕೆಟ್ ಪಡೆದರು. ಉಳಿದಂತೆ ಮೊರ್ತಜಾ, ಫರ್ಹಾದ್ ರೆಜಾ ತಲಾ 1 ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್
ನೇಪಾಳ 20 ಓವರ್ಗಳಲ್ಲಿ 5 ವಿಕೆಟ್ಗೆ 126
(ಪಾರಸ್ ಖಡ್ಕಾ 41, ಶರದ್ ವೇಸವ್ಕರ್ 40, ಅಲ್ ಅಮೀನ್ 17ಕ್ಕೆ2)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

