ನೇಪಾಳಕ್ಕೆ ಅರ್ಹ ಜಯ
ಚಿತ್ತಗಾಂಗ್: ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಬಲಿಷ್ಠ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದ ನೇಪಾಳ ತಂಡದ ಆಟಗಾರರು, ಟಿ20 ವಿಶ್ವಕಪ್‌ನ ಅರ್ಹತಾ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಅರ್ಹ ಗೆಲವು ದಾಖಲಿಸುವಲ್ಲಿ ಯಶಸ್ವಿಯಾದರು.
ಗುರುವಾರ ಇಲ್ಲನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆದ ಎ ಗುಂಪಿನ ಅರ್ಹತಾ ಪಂದ್ಯದಲ್ಲಿ ನೇಪಾಳ ತಂಡ 9 ರನ್‌ಗಳ ಅಂತರದಲ್ಲಿ ಅಫ್ಘಾನಿಸ್ತಾನ ತಂಡವನ್ನು ಮಣಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ಅಫ್ಘಾನಿಸ್ತಾನ ನಿರ್ಧರಿಸಿತು. ಹಾಗಾಗಿ ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 141 ರನ್ ದಾಖಲಿಸಿತು. ನಂತರ ಈ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 132 ರನ್ ದಾಖಲಿಸಲಷ್ಟೇ ಶಕ್ತವಾಯಿತು.
ಈ ಗೆಲವಿನ ಮೂಲಕ ಅಫ್ಘಾನಿಸ್ತಾನ ತಂಡವು ಟಿ20 ವಿಶ್ವಕಪ್‌ನ ಸೂಪರ್ 10 ಹಂತವನ್ನು ತಲುಪುವಲ್ಲಿ ವಿಫಲವಾಗಿದೆ.
ಸುಭಾಷ್ ಅರ್ಧಶತಕ: ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನೇಪಾಳ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾಗಿದ್ದು, ಸುಭಾಷ್ ಕಾಕುರಲ್(56) ಅರ್ಧಶತಕ.
ಆರಂಭಿಕರಾಗಿ ಕಣಕ್ಕಿಳಿದ ಸುಭಾಷ್ ಹಾಗೂ ಸಾಗರ್ ಪುನ್(8) ತಂಡಕ್ಕೆ 19 ರನ್‌ಗಳ ಆರಂಭ ನೀಡಿದರು. ಈ ವೇಳೆ ಜ್ಞಾನೇಂದ್ರ ಮಲ್ಲಾ(22) ಜತೆಗೂಡಿದ ಸುಭಾಷ್ ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನ ನಡೆಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶರದ್ ವೆಸವ್‌ಕರ್(37) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 140 ರನ್‌ಗಳ ಗಡಿಗೆ ಕೊಂಡೋಯ್ದರು.
ಮುಖಿಯಾ ಮಾರಕ ದಾಳಿ: ನೇಪಾಳ ನೀಡಿದ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ತಾನಕ್ಕೆ ಜಿತೇಂದ್ರ ಮುಖಿಯಾ ಮುಳುವಾಗಿ ಪರಿಣಮಿಸಿದರು.
ಆಫ್ಘನ್ ತಂಡದ ಪರ ಆರಂಭಿಕ ನಾಲ್ವರು ಬ್ಯಾಟ್ಸ್‌ಮನ್‌ಗಳು ಒಂದಂಕಿ ರನ್ ಗಳಿಕೆಗೆ ಪೆವಿಲಿಯನ್ ಸೇರಿಕೊಂಡ ಪರಿಣಾಮ 50 ರನ್ ಆಗುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ವೇಳೆ ಜತೆಯಾದ ಶಫಿಕುಲ್ಲಾ(36) ಹಾಗೂ ಅಸ್ಗರ್ ಸ್ಟ್ಯಾನಿಕಾಜಿ(49) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಗೆಲವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಲಿಲ್ಲ. ನೇಪಾಳ ತಂಡದ ಪರ ಮುಖಿಯಾ 18 ರನ್‌ಗಳಿಗೆ 3 ವಿಕೆಟ್ ಪಡೆದು ಮಿಂಚಿದರು.
ಸಂಕ್ಷಿಪ್ತ ಸ್ಕೋರ್
ನೇಪಾಳ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 141
(ಕಾಕುರೆಲ್ 56, ಶರದ್ ವೆಸವ್‌ಕರ್ 37, ಶಪೂರ್ 19ಕ್ಕೆ2)
ಅಫ್ಘಾನಿಸ್ತಾನ 20 ಓವರ್‌ಗಲಲ್ಲಿ 8 ವಿಕೆಟ್‌ಗೆ 132
(ಅಸ್ಗರ್ 49, ಶಫಿಕುಲ್ಲಾ 36, ಮುಖಿಯಾ 18ಕ್ಕೆ3, ಶಕ್ತಿ ಗೌಚನ್ 25ಕ್ಕೆ2)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

