ಕ್ರೀಡೆ

ಪ್ರಶಸ್ತಿ ಉಳಿಸಿಕೊಂಡ ಏರ್ ಇಂಡಿಯಾ

Published On :

ಲಖನೌ: ಹಾಲಿ ಚಾಂಪಿಯನ್ ಏರ್ ಇಂಡಿಯಾ ನಾಲ್ಕನೇ ಹಾಕಿ ಇಂಡಿಯಾ ಸೀನಿಯರ್ ಪುರುಷರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಆ ಮೂಲಕ ಹಾಲಿ ಚಾಂಪಿಯನ್ ಹೆಗ್ಗಳಿಕೆ ಕಾಯ್ದುಕೊಂಡಿದೆ.
ಇಲ್ಲಿನ ಮೇಜರ್ ಧ್ಯಾನ್‌ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಏರ್ ಇಂಡಿಯಾ ಆಟಗಾರರು 4-1 ಗೋಲುಗಳಿಂದ ಕಾಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ ತಂಡವನ್ನು ಮಣಿಸಿ ಈ ಸಾಧನೆ ಮಾಡಿದರು.
ವಿಜೇತ ಏರ್ ಇಂಡಿಯಾ ತಂಡದ ಪರ ಗಗನ್‌ಪ್ರೀತ್ ಸಿಂಗ್ 14ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಬಾರಿಸಿ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ಮತ್ತೆ 29ನೇ ನಿಮಿಷದಲ್ಲಿ ದೊರೆಯ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿಯೇ ಗಗನ್‌ಪ್ರೀತ್ ಸಿಂಗ್ ತಂಡದ ಪರ ಎರಡನೇ ಗೋಲು ಗಳಿಸಿ ಮುನ್ನಡೆಯನ್ನು 2-0ಗೆ ಹೆಚ್ಚಿಸಿದರು.  ಇನ್ನು ಉತ್ತರಾರ್ಧದಲ್ಲಿ ಗಗನ್‌ಪ್ರೀತ್ ಅವರೇ 39ನೇ ನಿಮಿಷದಲ್ಲಿ ಗೋಲು ದಾಖಲಿಸಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಮುಂದೆ ಹೋರಾಟ ತೀವ್ರಗೊಳಿಸಿದ ಕಾಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ ತಂಡ 59ನೇ ನಿಮಿಷದಲ್ಲಿ ಧ್ಯಾನ್‌ಸಿಂಗ್ ಮೂಲಕ ಗೋಲು ಗಳಿಸಿ ಹಿನ್ನಡೆ ಅಂತರವನ್ನು 1-3ಕ್ಕೆ ತಗ್ಗಿಸಿಕೊಂಡಿತು. ಆದರೆ, ಆಟ ಮುಗಿಯಲು ಕೆಲವೇ ನಿಮಿಷಗಳಿದ್ದಾಗ ಮತ್ತೊಂದು ಗೋಲು ದಾಖಲಿಸಿದ ಏರ್ ಇಂಡಿಯಾ ಸುಲಭವಾಗಿ ಗೆಲವು ದಾಖಲಿಸಿತು. ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಉತ್ತರಪ್ರದೇಶ ತಂಡ 4-2 ಗೋಲುಗಳಿಂದ ರೈಲ್ವೆ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ ತಂಡದ ವಿರುದ್ಧ ಜಯಗಳಿಸಿ ಮೂರನೇ ಸ್ಥಾನದ ಗೌರವ ಪಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.