ಭಾರತೀಯರಿಗೆ 129 ರನ್ ಗುರಿ
ಸಿಲ್ಹೆಟ್: ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಶ್ರೀಲಂಕಾ ವನಿತೆಯರು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ವನಿತೆಯರ ವಿಶ್ವಕಪ್ನಲ್ಲಿ ಭಾರತ ತಂಡಕ್ಕೆ 129 ರನ್ಗಳ ಸವಾಲೊಡ್ಡಿದರು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಲಂಕಾ ವನಿತೆಯರು, ಆರಂಭಿಕ ಆಟಗಾರ್ತಿ ಎ.ಸಿ ಜಯಾಂಗಿನಿ (43) ಮತ್ತು ಮಧ್ಯಮ ಕ್ರಮಾಂಕದಲ್ಲಿ ಎಲ್. ಇ ಕೌಶಲ್ಯ (34) ಅವರ ಆಕರ್ಷಕ ಬ್ಯಾಟಿಂಗ್ ನೆರವಿನೊಂದಿಗೆ ಶ್ರೀಲಂಕಾ ನಿಗದಿತ ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 128 ರನ್ ಕಲೆಹಾಕಿತು. ಇನ್ನು ಯಶೋಧಾ ಮೆಂಡೀಸ್ (13) ಮತ್ತು ಕುಮಾರಿಹಾಮಿ (13) ಅವರು ಲಂಕಾ 120ರ ಗಡಿ ದಾಟಲು ನೆರವಾದರು. ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಪೂನಮ್ ಯಾದವ್ ಅವರು 3 ಓವರ್ಗಳಲ್ಲಿ 20 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇನ್ನು ಸೋನಿಯಾ ದಾಬಿರ್, ಜಿ. ಸುಲ್ತಾನ್, ಎ. ದಾಸ್, ಎಸ್. ಪಾಂಡೆ ಹಾಗೂ ಎಚ್. ಕೌರ್ ಅವರು ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

