ಶ್ರೀನಿ ಪದತ್ಯಾಗಕ್ಕೆ ಸುಪ್ರೀಂ ಸೂಚನೆ
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ. ಕಾರಣ, ಅವರು ಬಿಸಿಸಿಐನಲ್ಲಿ ಮುಂದುವರಿದರೆ, ಐಪಿಎಲ್ ಫಿಕ್ಸಿಂಗ್ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಅವರಿಗೆ ಸೂಚನೆ ನೀಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆದಿದೆ ಎನ್ನಲಾಗಿರುವ ಬೆಟ್ಟಿಗ್ ಮತ್ತು ಸ್ಪಾಟ್ ಫಿಕ್ಸಿಂಗ್ನಲ್ಲಿ ಸ್ವತಃ ಅವರ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ಕೆಲ ಕ್ರಿಕೆಟಿಗರು ಭಾಗಿಯಾಗಿರುವ ಪ್ರಕರಣದ ಕುರಿತು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸಬೇಕಾದರೆ, ಶ್ರೀನಿವಾಸನ್ ಅವರು ತಮ್ಮ ಸ್ಥಾನ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ನೇಮಿಸಿದ್ದ ತನಿಖಾ ತಂಡ ತನ್ನ ವರದಿಯನ್ನು ಪರಿಶೀಲಿಸಿದ ನಂತರ, ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷ ಸ್ಥಾನ ತ್ಯಜಿಸದ ಹೊರತು ಪ್ರಕರಣದಲ್ಲಿ ನ್ಯಾಯಸಮ್ಮತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ಆರೋಪ ಮಾಡಿರುವ ಕುರಿತು ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ಅವರ ನಾಯಕತ್ವದ ನ್ಯಾಯಪೀಠ ತಿಳಿಸಿದೆ.
'ಫಿಕ್ಸಿಂಗ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕಾದರೆ, ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂಬುದು ನಮ್ಮ ಅಭಿಪ್ರಾಯವಾಗಿದೆ' ಎಂದು ನ್ಯಾಯಪೀಠ ತಿಳಿಸಿದೆ. 'ಜನರ ಗೌರವಕ್ಕೆ ಧಕ್ಕೆ ತರಲು ನಾವು ಇಷ್ಟಪಡುವುದಿಲ್ಲ. ಆದರೆ, ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯದ ಹೊರತು, ಯಾವುದೇ ರೀತಿಯ ನ್ಯಾಯಸಮ್ಮತ ತನಿಖೆ ನಡೆಸಲು ಸಾಧ್ಯವಿಲ್ಲ. ಖುರ್ಚಿಗೆ ಅಂಟಿ ಕುಳಿತುಕೊಳ್ಳುವುದೇಕೆ? ಇದೊಂದು ಅಸಹ್ಯ. ನೀವು ರಾಜೀನಾಮೆ ನೀಡದಿದ್ದರೆ, ನಾವು ತೀರ್ಪು ನೀಡುತ್ತೇವೆ' ಎಂದಿದೆ ಬಿಸಿಸಿಐ.ಭಾರತ ತಂಡದ ಪರ ಆಡಿದ 6 ಆಟಗಾರರು ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಇದನ್ನು ಕೋರ್ಟ್ನಲ್ಲಿ ಬಹಿರಂಗಪಡಿಸದ ನ್ಯಾಯಾಲಯ, ವರದಿಯನ್ನು ನೋಡಿ ತಿಳಿದುಕೊಳ್ಳುವಂತೆ ಬಿಸಿಸಿಐನ ವಕೀಲರಿಗೆ ತಿಳಿಸಿದೆ. 'ತನಿಖೆಯಲ್ಲಿ ಮಾಡಲಾಗಿರುವ ಆರೋಪಗಳ ಗಂಭೀರತೆಯನ್ನು ತಿಳಿದುಕೊಳ್ಳಲು ವರದಿಯನ್ನು ಒಂದು ಬಾರಿ ಓದಿಕೊಳ್ಳಿ. ಆದರೆ, ಶ್ರೀನಿವಾಸನ್ ಅಥವಾ ಬಿಸಿಸಿಐ ಪರ ವಕೀಲರಾಗಿ ನೀವು ಅದನ್ನು ಓದಬೇಡಿ' ಎಂದು ನ್ಯಾಯಪೀಠ ತಿಳಿಸಿದೆ. ವರದಿಯಲ್ಲಿನ ಸಾರಾಂಶದ ಪ್ರಕಾರ ಆರೋಪಗಳ ಕುರಿತು ತನಿಖೆ ನಡೆಸಬೇಕಾಗಿದೆ ಬಿಸಿಸಿಐ ವಕೀಲರಿಗೆ ಸುಪ್ರೀಂ ತಿಳಿಸಿದೆ. ಇದರೊಂದಿಗೆ ಮಾರ್ಚ್ 27ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ವರದಿಯಲ್ಲಿರುವ ವಿಷಯ ಮತ್ತು ವರದಿಯಲ್ಲಿ ಸಲ್ಲಿಸಲಾಗಿರುವ ಆಟಗಾರರ ಹೆಸರುಗಳನ್ನು ಬಹಿರಂಗಪಡಿಸದಂತೆ ಬಿಸಿಸಿಐ ವಿಚಾರಣೆಯ ವೇಳೆ ನಯಾಲಯಕ್ಕೆ ಮನವಿ ಮಾಡಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

