ದಕ್ಷಿಣ ಆಫ್ರಿಕಾಕ್ಕೆ ದಂಡ
ಚಿತ್ತಗಾಂಗ್: ನ್ಯೂಜಿಲೆಂಡ್ ವಿರುದ್ಧದ ಐಸಿಸಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ ದಕ್ಷಿಣ ಆಫ್ರಿಕಾಕ್ಕೆ ದಂಡ ವಿಧಿಸಲಾಗಿದೆ. ನಾಯಕ ಫಫ್ ಡು ಪ್ಲೆಸಿಸ್ ಪಂದ್ಯದ ಶುಲ್ಕದಲ್ಲಿ ಪ್ರತಿಶತ 40ರಷ್ಟು ಹಾಗೂ ಆಟಗಾರರು ಪ್ರತಿಶತ 20ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ.
ನಿಗದಿತ ಅವಧಿಗಿಂತ ಎರಡು ಓವರುಗಳನ್ನು ಕಡಿಮೆ ಎಸೆದಿದ್ದಕ್ಕೆ ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್, ದಕ್ಷಿಣ ಆಫ್ರಿಕಾ ಆಟಗಾರರಿಗೆ ದಂಡ ವಿಧಿಸಿದ್ದಾರೆ.
ಐಸಿಸಿ ನೀತಿ ಸಂಹಿತೆಯ ನಿಗದಿತ ಅವಧಿಗಿಂತ ಕಡಿಮೆ ಓವರ್ ಬೌಲ್ ಮಾಡಿದಲ್ಲಿ ಆಟಗಾರ ಮತ್ತು ಆಟಗಾರನ ಬೆಂಬಲಿತ ಸಿಬ್ಬಂದಿಗೆ ದಂಡ ವಿಧಿಸಲಾಗುತ್ತದೆ. ಒಂದು ಓವರಿಗೆ ಪ್ರತಿಶತ 10ರಷ್ಟು ದಂಡ ನೀಡಬೇಕಾಗುತ್ತದೆ.
ಒಂದು ವೇಳೆ ಮುಂದಿನ 12 ತಿಂಗಳ ಅವಧಿಯಲ್ಲಿ ಫಫ್ ಡು ಪ್ಲೆಸಿಸ್ ಟಿ-20 ಪಂದ್ಯಾವಳಿಯಲ್ಲಿ ಇನ್ನು ಒಂದು ಓವರ್ ಕಡಿಮೆ ಬೌಲ್ ಮಾಡಿದರೆ, ಒಂದು ಪಂದ್ಯದ ನಿಷೇಧದ ಶಿಕ್ಷೆಗೆ ಗುರಿಯಾಗುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

