ಕ್ರೀಡೆ

ಅಧ್ಯಕ್ಷನಾಗಲು ಸಿದ್ಧ: ಗವಾಸ್ಕರ್

Published On :

ನವದೆಹಲಿ: ಸುಪ್ರೀಂ ಕೋರ್ಟ್ ನೀಡಿದ ಸಲಹೆಯಂತೆ ಬಿಸಿಸಿಐ ಅಧ್ಯಕ್ಷ ಸ್ಥಾನ ನಿರ್ವಹಿಸಲು ಖ್ಯಾತ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಿನ್ನೆಲೆಯಲ್ಲಿ ಗವಾಸ್ಕರ್ ಅವರಂತಹ ಹಿರಿಯ ಕ್ರಿಕೆಟಿಗರು, ಬಿಸಿಸಿಐ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿ ಎಂದು ಸುಪ್ರೀಂ ಗುರವಾರ ಸಲಹೆ ನೀಡಿತ್ತು. 'ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಈ ರೀತಿ ಸಲಹೆ ನೀಡಿದೆ. ಇಂತಹ ಸಂದರ್ಭದಲ್ಲಿ ನಾವು ಇದನ್ನು ಒಪ್ಪಿಕೊಳ್ಳಲೇಬೇಕು. ಪ್ರಸ್ತುತ ನಾನು ವೀಕ್ಷಕ ವಿಶ್ಲೇಷಕನಾಗಿ ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ. ಆದರೆ, ಸುಪ್ರೀಂ ಕೋರ್ಟ್ ನನಗೆ ಅಧ್ಯಕ್ಷನಾಗಲು ಸಲಹೆ ನೀಡಿದರೆ, ನಾನು ಆ ಹುದ್ದೆ ನಿರ್ವಹಿಸಲು ಸಿದ್ಧನಿದ್ದೇನೆ' ಎಂದಿದ್ದಾರೆ ಗವಾಸ್ಕರ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.