ಕ್ರೀಡೆ

ಟ್ವೆಂಟಿ20 ಬೆಟ್ಟಿಂಗ್: ನಾಲ್ವರ ಬಂಧನ

Published On :

ಹುಬ್ಬಳ್ಳಿ: ವಿಶ್ವಕಪ್ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯ ಭಾರತ ಮತ್ತು ಬಾಂಗ್ಲಾದೇಶ ಪಂದ್ಯಕ್ಕಾಗಿ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.  ಇನ್ನೊಬ್ಬನನ್ನು ಬಳ್ಳಾರಿಯಲ್ಲಿ ಬಂಧಿಸಲಾಗಿದೆ.
  ಹೇಗ್ಗೆರಿ ಬಳಿ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಒಂದು ಟಿವಿ, ಐದು ಮೊಬೈಲ್ ಹ್ಯಾಂಡ್ಸೆಟ್ಗಳು ಮತ್ತು 19,750 ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಹುಬ್ಬಳ್ಳಿಯ ನಾಗರಾಜ ಮಿಸ್ಕಿನ್, ರಾಜೀವ ತುಳಜಪ್ಪ ಪವಾರ ಮತ್ತು ಶೈಲೇಂದ್ರ ವೀರಪ್ಪ ಹೊನ್ನಳ್ಳಿ ಎಂದು ಗುರುತಿಸಲಾಗಿದೆ.
ಬಳ್ಳಾಯಲ್ಲಿ ಬಂಧನ: ಟ್ವೆಂಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್ ಅಡ್ಡೆ ಮೇಲೆ ಡಿಸಿಐಬಿ, ಬ್ರೂಸ್ಪೇಟೆ ಠಾಣೆ ಪೊಲೀಸರು ದಾಳಿ ಮಾಡಿ ವ್ಯಕ್ತಿಯೊಬ್ಬನನ್ನು ಬಂಧಿಸಿ 64 ಸಾವಿರ ವಶಪಡಿಸಿಕೊಂಡ ಘಟನೆ ಮಿಲ್ಲರ್ ಪೇಟೆಯಲ್ಲಿ ನಡೆದಿದೆ. ಬಂಧಿತನನ್ನು ಶಂಕರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.