ಕ್ರೀಡೆ

ನಿಧಾನಗತಿ ಬೌಲಿಂಗ್ ರೋಹಿತ್‌ಗೆ ದಂಡ

Published On :

ದುಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾರಣಕ್ಕೆ ದಂಡಕ್ಕೆ ಗುರಿಯಾಗಬೇಕಾಗಿದೆ.
ಪ್ರಸಕ್ತ ಋತುವಿನ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಈ ತಪ್ಪು ಎಸಗಿರುವ ರೋಹಿತ್ ಶರ್ಮಾ ಪಂದ್ಯದ ಪ್ರತಿಶತ 20 ಸಾವಿರ ಡಾಲರ್‌ನಷ್ಟು ದಂಡಕ್ಕೆ ಒಳಗಾಗಿದ್ದಾರೆ.
ಮುಂಬೈ ಬೌಲರ್‌ಗಳ ನಿಧಾನಗತಿಯ ಬೌಲಿಂಗ್‌ನಿಂದಾಗಿ ರೋಹಿತ್, ಮೊದಲ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗಿದೆ. ಹಾಗಾಗಿ, ಅವರಿಗೆ ಈ ದಂಡ ವಿಧಿಸಲಾಗಿದೆ ಎಂದು ಮ್ಯಾಚ್ ರೆಫರಿಗಳು ತಿಳಿಸಿದ್ದಾರೆ.
ಐಪಿಎಲ್‌ನ ಮೊದಲ ಹಂತದ ಪಂದ್ಯಾವಳಿಗೆ ಯುಎಇನಲ್ಲಿ ನಿನ್ನೆ ತೆರೆ ಬಿದ್ದಿದ್ದು, ಶುಕ್ರವಾರದಿಂದ ಭಾರತದಲ್ಲಿ ಪಂದ್ಯಾವಳಿ ಶುರುವಾಗಲಿದೆ. ಯುಎಇನಲ್ಲಿ ಆಡಿದ ಎಲ್ಲ ಐದೂ ಪಂದ್ಯಗಳಲ್ಲಿ ದಯನೀಯ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ಅಂಕದಪಟ್ಟಿಯಲ್ಲಿ ಖಾತೆಯನ್ನೇ ತೆರೆದಿಲ್ಲ.
ಆದರೆ, ಭಾರತೀಯ ಹಂತದ ಟೂರ್ನಿಯಲ್ಲಿ ಮುಂಬೈ ಗೆಲ್ಲುವ ವಿಶ್ವಾಸ ಹೊಂದಿದೆ. ಸೆಮಿಫೈನಲ್ ಪ್ರವೇಶಿಸುವ ಆಸೆ ಜೀವಂತವಾಗಿರಿಸಿಕೊಳ್ಳಬೇಕಾದರೆ ಮುಂಬೈ ತಂಡ ಲೀಗ್ ಹಂತದಲ್ಲಿ ಉಳಿದಿರುವ ಎಲ್ಲ ಒಂಬತ್ತೂ ಪಂದ್ಯಗಳನ್ನು ಗೆದ್ದುಕೊಳ್ಳಲೇಬೇಕಾದ ಸಂಕಷ್ಟದಲ್ಲಿ ಈಗ ಸಿಲುಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.