ಸಾಮಾಜಿಕ ಕಾರ್ಯಕ್ಕೆ ಇಂದಿನ ಪಂದ್ಯ
ಮುಂಬೈ: ಕಳೆದ ಐದು ವರ್ಷಗಳಿಂದ ಎಜುಕೇಶನ್ ಫಾರ್ ಆಲ್ ಎಂಬ ಸಾಮಾಜಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ತವರಿನಲ್ಲಿ ನಡೆಯಲಿರುವ ಮೊದಲ ಪಂದ್ಯವನ್ನು ಈ ಕಾರ್ಯಕ್ರಮಕ್ಕೆ ಮೀಸಲಿಡಲು ನಿರ್ಧರಿಸಿದೆ.
ಶನಿವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಹಾಗೂ ಪಂಜಾಬ್ ವಿರುದ್ಧದ ಪಂದ್ಯದಲ್ಲಿ, ಮಹಾರಾಷ್ಟ್ರದ ವಿವಿಧ ಎನ್‌ಜಿಒಗಳಿಂದ ಸುಮಾರು 18 ಸಾವಿರಕ್ಕೂ ಹೆಚ್ಚಿನ ಸೌಲಭ್ಯ ವಂಚಿತ ಮಕ್ಕಳು ಪಂದ್ಯವನ್ನು ವೀಕ್ಷಿಸುವ ಅವಕಾಶ ಮಾಡಿಕೊಡಲಾಗುತ್ತದೆ.
ಪ್ರತಿ ವರ್ಷವು ಮುಂಬೈ ಇಂಡಿಯನ್ಸ್ ತಂಡ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಈ ಆವೃತ್ತಿಯಲ್ಲಿ ಮೊದಲ ಹಂತವಾಗಿ ಒಂಬ್ಬತ್ತು ಮಕ್ಕಳನ್ನು ಯುಎಇಯಲ್ಲಿ ನಡೆದ ಪಂದ್ಯಕ್ಕೆ ಕರೆದೊಯ್ಯಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಮಕ್ಕಳು ಕ್ರಿಕೆಟ್ ತಾರೆಗಳನ್ನು ಭೇಟಿ ಮಾಡಿ ಅವರೊಂದಿಗೆ ಮಾತು ಕತೆ ನಡೆಸುವ ಅವಕಾಶ ಮಾಡಿಕೊಡಲಾಗುತ್ತದೆ.
ನಾಳಿನ ಪಂದ್ಯದಲ್ಲಿ ಮೈದಾನದ ಬಹುತೇಕ ಸೌಲಭ್ಯ ವಂಚಿತ ಮಕ್ಕಳು ಪಂದ್ಯವನ್ನು ವೀಕ್ಷಿಸುತ್ತಿದ್ದು, ಭಾರತದಲ್ಲಿ ಮೊದಲ ಬಾರಿಗೆ ವೃತ್ತಿಪರ ಹಾಗೂ ಸ್ಪರ್ಧಾತ್ಮಕ ಕ್ರೀಡಾ ಪಂದ್ಯದಲ್ಲಿ ಇಷ್ಟು ಪ್ರಮಾಣದಲ್ಲಿ ಸೌಲಭ್ಯ ವಂಚಿತ ಮಕ್ಕಳು ವೀಕ್ಷಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಎಜುಕೇಶನ್ ಫಾರ್ ಆಲ್ ಕಾರ್ಯಕ್ರಮದಿಂದ ಮುಂಬೈ ತಂಡವು ವಿವಿಧ ಎನ್‌ಜಿಒಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚಿನ ಮಕ್ಕಳು ತಮ್ಮ ಜೀವನ ರೂಪಿಸಿಕೊಳ್ಳುವ ಕೌಶಲ್ಯ ಹಾಗು ಅವರ ಏಳಿಗೆಗೆ ಸಹಾಯ ಮಾಡಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

