ಕ್ರೀಡೆ

ಐಸಿಸಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯ ಪರಿಶೀಲನೆ

Published On :

ದುಬೈ: ಐಸಿಸಿಯ ಅಧಿಕಾರವನ್ನು ಹಂಚಿಕೊಂಡಿರುವ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ, ಪ್ರಸ್ತುತ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಹಾಗೂ ಭದ್ರತಾ ವಿಭಾಗದ(ಎಸಿಎಸ್ಯು) ಕಾರ್ಯವೈಖರಿಯನ್ನು ಪರಿಶೀಲಿಸಲು ನಿರ್ಧರಿಸಿದೆ. ಅಲ್ಲದೆ ಈ ಅಧಿಕಾರಿಗಳು ಯಾವುದೇ ಮಾಹಿತಿಯನ್ನು, ಮಂಡಳಿಯ ಮುಖ್ಯ ಕಾರ್ಯಕಾರಿ ಅಧಿಕಾರಿಯ ಬದಲಿಗೆ ಅಧ್ಯಕ್ಷರಿಗೆ ನೇರವಾಗಿ ತಿಳಿಸುವಂತೆ ಬದಲಾವಣೆ ತರುವ ಸಾಧ್ಯತೆ ಇದೆ.
ಈ ಒಂದು ಬೆಳವಣಿಗೆಯಿಂದ ಇನ್ನು ಮುಂದೆ ಎಸಿಎಸ್ಯು ಅಧಿಕಾರಿಗಳು ಮಂಡಳಿಯ ಮುಖ್ಯ ಕಾರ್ಯಕಾರಿ ಅಧಿಕಾರಿ ಡೇವಿಡ್ ರಿಚರ್ಡ್ಸನ್ ಅವರ ಬದಲಿಗೆ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಬಿಸಿಸಿಐ ಸ್ಥಾನದಿಂದ ಕೆಳಗಿಳಿದಿರುವ ಹಾಗೂ ಮುಂದಿನ ತಿಂಗಳು ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವ ಎನ್.ಶ್ರೀನಿವಾಸನ್ ಅವರಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕಾಗುತ್ತದೆ.
ಕಳೆದ ತಿಂಗಳು ನಡೆದ ಐಸಿಸಿ ಸಭೆಯಲ್ಲಿ ಎಸಿಎಸ್ಯುನ ಕಾರ್ಯವೈಖರಿ ಬಗ್ಗೆ ಔಪಚಾರಿಕ ಪರಿಶೀಲನೆ ನಡೆಸಲಾಗಿತ್ತು. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ನ ಪ್ರತಿನಿಧಿಗಳು ಹಾಗೂ ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡೇವಿಡ್ ರಿಚರ್ಡ್ಸನ್ ಒಳಗೊಂಡ ನಾಲ್ವರ ಸಮಿತಿ ಈ ಕುರಿತ ವರದಿಯನ್ನು ತಯಾರಿಸಲಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.