ಕ್ರೀಡೆ

ಪೊಲಾರ್ಡ್, ಸ್ಟಾರ್ಕ್ಗೆ ದಂಡ

Published On :

ಮುಂಬೈ: ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಐಪಿಎಲ್ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮರೆತು ಅಸಭ್ಯವಾಗಿ ವರ್ತಿಸಿದ ಕೀರನ್ ಪೊಲಾರ್ಡ್ ಹಾಗೂ ಮಿಚೆಲ್ ಸ್ಟಾರ್ಕ್ಗೆ ದಂಡ ವಿಧಿಸಲಾಗಿದೆ.
ಪೊಲಾರ್ಡ್ರತ್ತ ಅನಾವಶ್ಯಕವಾಗಿ ಚೆಂಡು ಎಸೆತ ಸ್ಟಾರ್ಕ್ಗೆ ಪಂದ್ಯದ ಶೇ.50ರಷ್ಟು ಸಂಭಾವನೆಯನ್ನು ದಂಡ ವಿಧಿಸಿದರೆ, ಸ್ಟಾರ್ಕ್ರತ್ತ ಬ್ಯಾಟ್ ಬಿಸಾಡಿದ ಪೊಲಾರ್ಡ್ಗೆ ಪಂದ್ಯದ ಶೇ.75ರಷ್ಟು ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ನ ಕೀರನ್ ಪೊಲಾರ್ಡ್ ಹಾಗೂ ಆರ್ಸಿಬಿಯ ಮಿಚೆಲ್ ಸ್ಟಾರ್ಕ್ ಅವರಿಗೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ಪಂದ್ಯದ ವೇಳೆ ಮಂದಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ.
ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾ ಎರಡನೇ ಬಾರಿಗೆ ಮಂದಗತಿಯ ಬೌಲಿಂಗ್ ನಡೆಸಿರುವುದರಿಂದ ರು. 24 ಲಕ್ಷ ದಂಡ, ಕೊಹ್ಲಿ ಮೊದಲ ಬಾರಿಗೆ ಮಾಡಿರುವುದರಿಂದ 12 ಲಕ್ಷ ದಂಡ ವಿಧಿಸಲಾಗಿದೆ. ಇನ್ನು ಮುಂಬೈ ತಂಡದ ಇತರೆ 10 ಸದಸ್ಯರಿಗೂ ಶೇ.25ರಷ್ಟು ದಂಡ ವಿಧಿಸಲಾಗಿದೆ. ಆರ್ಸಿಬಿ ತಂಡದ ಬೌಲರ್ ವರುಣ್ ಎರಾನ್ ಐಪಿಎಲ್ ವಸ್ತ್ರ ನಿಯಮವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.