ಫಿಕ್ಸಿಂಗ್: ಆಟಗಾರರಿಗೆ ರಾಹುಲ್ ದ್ರಾವಿಡ್ ಎಚ್ಚರಿಕೆ
ಅಹ್ಮದಾಬಾದ್: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಈವರೆಗೆ ಯಾವುದೇ ರೀತಿಯ ಸ್ಪಾಟ್ ಫಿಕ್ಸಿಂಗ್ ಅಥವಾ ಮ್ಯಾಚ್ ಫಿಕ್ಸಿಂಗ್ ವಿವಾದಗಳು ಕೇಳದಿರುವುದು ಸಂತಸ ತಂದಿದೆ; ಆದರೂ, ಆಟಗಾರರು ಬಹಳ ಎಚ್ಚರದಿಂದಿರಬೇಕು ಎಂದು ರಾಜಸ್ಥಾನ ರಾಯಲ್ಸ್ ತಂಡದ ಮಾರ್ಗದರ್ಶಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಈ ಬಾರಿ ಮ್ಯಾಚ್ ಫಿಕ್ಸಿಂಗ್ನಂತಹ ಘಟನೆಗಳು ಬೆಳಕಿಗೆ ಬರದಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದರೂ ಸಹ ಕೆಲವರು ಆಟವನ್ನು ಹಾಳುಗೆಡವಲು ಬಯಸುತ್ತಾರೆ, ಹಾಗಾಗಿ, ಆಟಗಾರರ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ ಎಂದು ಹೇಳಿದ್ದಾರೆ. ಹೈದರಾಬಾದ್ ವಿರುದ್ಧ ಗುರುವಾರ ಇಲ್ಲಿ ನಡೆಯಲಿರುವ ಪಂದ್ಯದ ಮುನ್ನಾದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ಅಹ್ಮದಾಬಾದ್ ರಾಜಸ್ಥಾನ ರಾಯಲ್ಸ್ ಪಾಲಿಗೆ ಅದೃಷ್ಟದ ತಾಣ. ಮುಂದಿನ ಪಂದ್ಯಗಳಲ್ಲಿ ಸ್ಥಳೀಯ ಅಭಿಮಾನಿಗಳು ತಮ್ಮ ತಂಡವನ್ನು ಬೆಂಬಲಿಸುವ ವಿಶ್ವಾಸ ತಮಗಿದೆ ಎಂದು ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ರಾಜಸ್ಥಾನಕ್ಕೆ ತವರು ಅಂಗಣ ಜೈಪುರ ಸ್ಥಳವನ್ನು ನೀಡಿಲ್ಲ. ಬದಲಾಗಿ, ಅಹ್ಮದಾಬಾದವೇ ರಾಜಸ್ಥಾನದ ಪಾಲಿಗೆ ತವರು ಅಂಗಣವಾಗಿದೆ. ಕಳೆದ ಬಾರಿ ಸ್ಪಾಟ್ ಫಿಕ್ಸಿಂಗ್ ವಿವಾದ ಉಲ್ಬಣಿಸಿ ರಾಜಸ್ಥಾನ ಆಟಗಾರರಾದ ಶ್ರೀಶಾಂತ್, ಅಜಿತ್ ಚಂಡಿಲಾ, ಅಂಕಿತ್ ಚೌವಾಣ್ರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

