ಕ್ರೀಡೆ

ಅರ್ಜುನ ಪ್ರಶಸ್ತಿಗೆ ರಘುನಾಥ್ ಹೆಸರು

Published On :

ನವದೆಹಲಿ: ಭಾರತ ಹಾಕಿ ತಂಡದ ಹಿರಿಯ ಡ್ರ್ಯಾಗ್ ಫ್ಲಿಕರ್ ಕರ್ನಾಟಕದ ವಿ.ಆರ್ ರಘುನಾಥ್ ಸೇರಿದಂತೆ ಒಟ್ಟು ನಾಲ್ವರು ಆಟಗಾರರ ಹೆಸರನ್ನು ಹಾಕಿ ಇಂಡಿಯಾ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ.
2014ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಹಾಕಿ ಇಂಡಿಯಾ ವಿ.ಆರ್ ರಘುನಾಥ್ ಜತೆಗೆ ಸ್ಟ್ರೈಕರ್ ಧರಮ್‌ವೀರ್ ಸಿಂಗ್, ತುಶಾರ್ ಖಾಂಡೇಕರ್ ಮತ್ತು ಮಾಜಿ ನಾಯಕ ಭರತ್ ಛೆಟ್ರಿ ಅವರ ಹೆಸರನ್ನು ಶಿಫಾರಸ್ಸು ಮಾಡಿದೆ. ಇದೇವೇಳೆ ಅರ್ಜುನ ಪ್ರಶಸ್ತಿ ಜತೆಗೆ ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗೆ ಹಾಕಿ ಇಂಡಿಯಾ ಹೆಸರನ್ನು ಶಿಫಾರಸ್ಸು ಮಾಡಿದೆ. ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿಗೆ ಮಹಿಳಾ ತಂಡದ ಮಾಜಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ತಂಡದ ಮಾಜಿ ಕೋಚ್ ಸುಮ್ರಾಯ್ ಟೆಟೆ ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗೆ ಭಾರತ ಕಿರಿಯ ಮಹಿಳಾ ತಂಡದ ಕೋಚ್ ರೊಮೇಶ್ ಪಥಾನಿಯಾ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.