ಕ್ರೀಡೆ

ರಾಂಚಿಯಲ್ಲಿ ಪ್ರಬಲ ಪೈಪೋಟಿ

Published On :

ರಾಂಚಿ: ಉತ್ತಮ ಪ್ರದರ್ಶನ ನೀಡುವ ಮೂಲಕ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಐಪಿಎಲ್ ಏಳನೇ ಆವೃತ್ತಿಯ ಸೋಮವಾರದ ಪಂದ್ಯದಲ್ಲಿ ಕಾದಾಟ ನಡೆಸುತ್ತಿದ್ದು, ರೋಚಕ ಹಣಾಹಣಿಯ ನಿರೀಕ್ಷೆ ಅಭಿಮಾನಿಗಳದ್ದಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 7ರಲ್ಲಿ ಗೆಲವು 2ರಲ್ಲಿ ಸೋಲನುಭವಿಸಿ 14 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನದಲ್ಲಿದ್ದು, ಪ್ಲೇ ಆಫ್ ಹಂತದ ಹೊಸ್ತಿಲಿಗೆ ಬಂದು ನಿಂತಿದೆ.
ಇತ್ತ ರಾಜಸ್ಥಾನ ರಾಯಲ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆಲವು 3ರಲ್ಲಿ ಸೋಲನುಭವಿಸುವ ಮೂಲಕ 12 ಅಂಕಗಳನ್ನು ಪಡೆದಿದ್ದು, ಮೂರನೇ ಸ್ಥಾನದಲ್ಲಿದೆ. ಹಾಗಾಗಿ ರಾಜಸ್ಥಾನ ರಾಯಲ್ಸ್ ತಂಡ ಪ್ಲೇ ಆಫ್ಗೆ ಪ್ರವೇಶಿಸಲು ಕನಿಷ್ಠ ಎರಡು ಪಂದ್ಯಗಳಲ್ಲಿ ಗೆಲವು ಸಾಧಿಸಬೇಕಿದೆ.
ಪ್ರಸಕ್ತ ಸಾಲಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಸಂಘಟಿತ ಪ್ರದರ್ಶನ ನೀಡುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿವೆ. ಹಾಗಾಗಿ ಈ ಎರಡು ತಂಡಗಳ ಮುಖಾಮುಖಿ ರೋಚಕ ಕ್ಷಣಕ್ಕೆ ಸಾಕ್ಷಿಯಾಗುವ ನಿರೀಕ್ಷೆಗಳಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂದ್ಯಾವಳಿಯಲ್ಲಿ ಪಂಜಾಬ್ ವಿರುದ್ಧ ಹೊರತುಪಡಿಸಿ ಆಡಿರುವ ಇತರೆ ತಂಡಗಳ ವಿರುದ್ಧ ಗೆಲವು ದಾಖಲಿಸಿದೆ. ಹಾಗಾಗಿ ಚೆನ್ನೈ ತಂಡ ತಮ್ಮ ಗೆಲವಿನ ಹಾದಿಯಲ್ಲಿ ಮುಂದುವರಿಯುವುದೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿದೆ.
ಇತ್ತ ರಾಜಸ್ಥಾನ ರಾಯಲ್ಸ್ ಸಹ ಸೋಲಿಗಿಂತ ಗೆಲವಿನ ಸಿಹಿಯನ್ನು ಹೆಚ್ಚಾಗಿ ಅನುಭವಿಸಿದ್ದು, ಈ ಪಂದ್ಯದಲ್ಲಿ ಗೆಲವಿನ ಹಾರ ರಾಯಲ್ಸ್ ಕೊರಳಿಗೆ ಬೀಳುವುದೇ ಎಂಬುದನ್ನು ಕಾದು ನೋಡಬೇಕು.
ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕ ಡ್ವೈನ್ ಸ್ಮಿತ್ ಅವರ ಪ್ರದರ್ಶನ ತಂಡಕ್ಕೆ ಬೆನ್ನೆಲುಬಾಗಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸುರೇಶ್ ರೈನಾ, ಮಹೇಂದ್ರ ಸಿಂಗ್ ಧೋನಿ, ಫಫ್ ಡುಪ್ಲೆಸಿಸ್ ಅಗತ್ಯ ಪ್ರದರ್ಶನ ನೀಡುತ್ತಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಮೋಹಿತ್ ಶರ್ಮಾ ಹಾಗೂ ಈಶ್ವರ್ ಪಾಂಡೆ ಗಮನಾರ್ಹ ಪ್ರದರ್ಶನ ನೀಡುತ್ತಿರುವುದು ಧೋನಿಗೆ ಅತ್ಮ ವಿಶ್ವಾಸ ಹೆಚ್ಚಿಸಿದೆ. ಇನ್ನು ಅಶ್ವಿನ್ ಹಾಗೂ ಜಡೇಜಾ ಸ್ಪಿನ್ ವಿಭಾಗದಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಜಸ್ಥಾನ ರಾಯಲ್ಸ್ ಆರಂಭಿಕರಾದ ಅಜಿಂಕ್ಯ ರಹಾನೆ ಹಾಗೂ ಕರುಣ್ ನಾಯರ್ ಉತ್ತಮ ಪ್ರದರ್ಶನ ಮುಂದುವರಿಸಬೇಕಿದೆ. ನಂತರ ಮಧ್ಯಮ ಕ್ರಮಾಂಕದಲ್ಲಿ ಶೇನ್ ವ್ಯಾಟ್ಸನ್, ಸ್ಟೀವನ್ ಸ್ಮಿತ್, ಸ್ಟುವರ್ಟ್ ಬಿನ್ನಿ, ಸಂಜು ಸ್ಯಾಮ್ಸನ್, ಕರುಣ್ ನಾಯರ್ರಂತಹ ಪ್ರತಿಭಾನ್ವಿತ ಆಟಗಾರರಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಫಾಕ್ನರ್, ಪ್ರವಿಣ್ ತಾಂಬೆ, ರಜತ್ ಭಾಟಿಯಾ ಪ್ರಮುಖ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ.
ಒಟ್ಟಿನಲ್ಲಿ ಎರಡು ಸಮಬಲ ತಂಡಗಳು ಕಾದಾಟ ನಡೆಸುತ್ತಿದ್ದು, ಐಪಿಎಲ್ನ ರೋಚಕತೆಗೆ ಮತ್ತೊಮ್ಮೆ ಸಾಕ್ಷಿಯಾಗುವ ನಿರೀಕ್ಷೆ ಈ ಪಂದ್ಯದ ಮೇಲಿದೆ.



ಇಂದಿನ ಪಂದ್ಯಗಳು


ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್
ಸ್ಥಳ: ರಾಂಚಿ, ಸಮಯ: ಸಂಜೆ 4ಕ್ಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಡೇರ್ಡೆವಿಲ್ಸ್
ಸ್ಥಳ: ಬೆಂಗಳೂರು, ಸಮಯ: ರಾತ್ರಿ 8ಕ್ಕೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.