ಕೆಕೆಆರ್‌ಗೆ ರಾಬಿನ್ ಬಲ

ಕಟಕ್: ಕೋಲ್ಕತಾ ನೈಟ್ ರೈಡರ್ಸ್ ಸಂಘಟಿತ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 7ನೇ ಆವೃತ್ತಿಯ ಬುಧವಾರದ ಪಂದ್ಯದಲ್ಲಿ ಸೋಲನುಭವಿಸಿದೆ.
ಇಲ್ಲಿನ ಬಾರಾಬತಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಮಟ್ಟದಲ್ಲಿ ಅಬ್ಬರಿಸಲು ವಿಫಲವಾಯಿತು.
20 ಓವರ್‌ಗಳಲ್ಲಿ 5 ವಿಕೆಟ್‌ಗೆ 141 ರನ್ ದಾಖಲಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ 18.4 ಓವರ್‌ಗಳಲ್ಲಿ 4 ವಿಕೆಟ್‌ಗೆ 142 ರನ್ ದಾಖಲಿಸಿ ಗೆಲವು ದಾಖಲಿಸಿತು.
ಆದಾಗ್ಯೂ ಕೂಡ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ನಾಯಕ ರೋಹಿತ್ ಶರ್ಮಾ ಅರ್ಧಶತಕ (51ರನ್, 45 ಎಸೆತ, 4 ಬೌಂಡರಿ, 2 ಸಿಕ್ಸರ್) ಮತ್ತು ಅಂಬಟಿ ರಾಯುಡು ಅವರ ಉಪಯುಕ್ತ
33 ರನ್‌ಗಳ (27 ಎಸೆತ, 3 ಬೌಂಡರಿ, 1 ಸಿಕ್ಸರ್) ನೆರವಿಂದ ಮುಂಬೈ ಪಡೆ ಚೇತರಿಸಿಕೊಂಡಿತು.
ಕೋಲ್ಕತಾ ನೈಟ್‌ರೈಡರ್ಸ್ ತಂಡದ ಪರ ಉತ್ತಮ ಬ್ಯಾಟಿಂಗ್ ನಡೆಸಿದ ರಾಬಿನ್ ಉತ್ತಪ್ಪ (80 ರನ್, 52 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ಯೂಸುಫ್ ಪಠಾಣ್ (20 ರನ್, 13 ಎಸೆತ, 3 ಬೌಂಡರಿ) ದಾಖಲಿಸಿ ತಂಡವನ್ನು ಗೆಲವಿನತ್ತ ಕೊಂಡೊಯ್ದರು.
ಆಕರ್ಷಕ ಬ್ಯಾಟಿಂಗ್ ಮಾಡಿದ ರಾಬಿನ್ ಉತ್ತಪ್ಪ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಸಂಕ್ಷಿಪ್ತ ಸ್ಕೋರ್
ಮುಂಬೈ ಇಂಡಿಯನ್ಸ್
20 ಓವರುಗಳಲ್ಲಿ 5 ವಿಕೆಟ್‌ಗೆ 141
ಅಂಬಟಿ ರಾಯುಡು ಸಿ ಯಾದವ್ ಬಿ ಚಾವ್ಲಾ 33, ರೋಹಿತ್ ಶರ್ಮಾ ಬಿ ನಾರಾಯಣ್ 51, ಕೋರೆ ಆ್ಯಂಡರ್ಸನ್ ಸಿ ಚಾವ್ಲಾ ಬಿ ಮಾರ್ಕೆಲ್ 18, ಬೌಲಿಂಗ್ ವಿವರ: ಮಾರ್ಕೆಲ್ 4-0-35-2, ಶಕೀಬ್ 4-0-21-1, ನಾರಾಯಣ್ 4-0-18-1, ಚಾವ್ಲಾ 4-0-32-1,
ಕೋಲ್ಕತಾ ನೈಟ್‌ರೈಡರ್ಸ್
18.4 ಓವರುಗಳಲ್ಲಿ 4 ವಿಕೆಟ್‌ಗೆ 142
ರಾಬಿನ್ ಉತ್ತಪ್ಪ ಬಿ ಸಿಮನ್ಸ್ 80, ಯೂಸುಫ್ ಪಠಾಣ್ ಅಜೇಯ 20, ಗಂಭೀರ್ ಬಿ ಹರ್ಭಜನ್ 14,
ಬೌಲಿಂಗ್ ವಿವರ: ಹರ್ಭಜನ್ 4-0-22-2, ಸಿಮನ್ಸ್ 3-0-34-1, ಮಾಲಿಂಗ 3.4-0-30-1
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


