ಮೂರನೇ ಕ್ರಮಾಂಕದಲ್ಲಿ ಆಡಲು ಇಚ್ಛಿಸುತ್ತೇನೆ: ನಮನ್ ಓಜಾ

ಹೈದರಾಬಾದ್: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆಕರ್ಷಕ ಅರ್ಧಶತಕ ದಾಖಲಿಸಿದ ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ಮನ್ ನಮನ್ ಓಜಾ, ಮುಂದಿನ ಪಂದ್ಯಗಳಲ್ಲೂ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಇಚ್ಛಿಸುವುದಾಗಿ ತಿಳಿಸಿದ್ದಾರೆ.
ಇನಿಂಗ್ಸ್ ಕಟ್ಟುವ ಜವಾಬ್ದಾರಿಯನ್ನು ಸ್ವೀಕರಿಸಲು ಸಿದ್ಧನಿದ್ದು, ಮೂರನೇ ಕ್ರಮಾಂಕದಲ್ಲಿ ಆಡಲು ಇಚ್ಛಿಸುತ್ತೇನೆ. 5 ಹಾಗೂ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಹೆಚ್ಚು ಕಠಿಣ ಪರಿಸ್ಥಿತಿ ಎದುರಾಗುತ್ತಿತ್ತು. ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಇನಿಂಗ್ಸ್ ಕಟ್ಟಲು ಹೆಚ್ಚು ಕಾಲಾವಕಾಶ ದೊರೆಯುತ್ತದೆ ಎಂದು ತಿಳಿಸಿದ್ದಾರೆ.
ಅಂತಿಮ ಓವರ್ಗಳಲ್ಲಿ ಬೌಲರ್ಗಳು ಬ್ಲ್ಯಾಕ್ ಹೊಲ್ನಲ್ಲಿ ಚೆಂಡನ್ನು ಎಸೆಯುತ್ತಾರೆ. ಹಾಗಾಗಿ ಬ್ಯಾಟ್ಸ್ಮನ್ಗಳು ರನ್ ಗಳಿಸಲು ಪರದಾಡಬೇಕಾಗುತ್ತದೆ. ಇನಿಂಗ್ಸ್ ಆರಂಭದಲ್ಲಿ ಕ್ಷೇತ್ರ ರಕ್ಷಣೆಯಲ್ಲಿ ನಿರ್ಬಂಧ ಹೇರಲಾಗಿದ್ದು, ರನ್ ಗಳಿಸಲು ಹೆಚ್ಚು ಅವಕಾಶ ಇರುತ್ತದೆ ಎಂದು ತಿಳಿಸಿದರು.
ಕಳೆದ ಪಂದ್ಯದಲ್ಲಿ ನನ್ನ ಆಟವನ್ನು ಆನಂದಿಸಿದೆ. ಫಲಿತಾಂಶ ನಮ್ಮ ಪರವಾಗಿದ್ದರೆ ಸಂತೋಷ ಇಮ್ಮಡಿಯಾಗುತ್ತಿತ್ತು ಎಂದರು.
ತಂಡದ ಕೋಚ್ ಟಾಮ್ ಮೂಡಿ ಅವರು ಆದಷ್ಟು ಸ್ವಾತಂತ್ರವಾಗಿ ಆಡಲು ತಿಳಿಸಿದರು. ನನ್ನ ಮೇಲೆ ನಿರ್ಬಂಧ ಹೇರಲಿಲ್ಲ. ಅಲ್ಲದೆ ಯಾವುದೇ ಒತ್ತಡವನ್ನು ಅನುಭವಿಸದೇ , ಏಕಾಗ್ರತೆಯಿಂದ ಬ್ಯಾಟಿಂಗ್ ಮಾಡಲು ತಿಳಿಸಿದರು. ಹಾಗಾಗಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದರು.
ಇನ್ನು ಡೇವಿಡ್ ವಾರ್ನರ್ರಂತಹ ಆಟಗಾರರ ಜತೆ ಬ್ಯಾಟಿಂಗ್ ಮಾಡುವುದು ನನ್ನ ಭಾಗ್ಯ. ಆತ ಹೆಚ್ಚು ಸಮಯವನ್ನು ವ್ಯಯ ಮಾಡುವುದಿಲ್ಲ. ಅವರ ಬ್ಯಾಟಿಂಗ್ ನನ್ನ ಮೇಲಿನ ಒತ್ತಡ ಕಡಿಮೆ ಮಾಡಿತು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


