ಕ್ರೀಡೆ

ಕ್ವಾರ್ಟರ್‌ಫೈನಲ್‌ನಲ್ಲಿ ಜೋಶ್ನಾಗೆ ಆಘಾತ

Published On :

ಹಲ್ (ಇಂಗ್ಲೆಂಡ್): ಭಾರತದ ಭರವಸೆಯ ಆಟಗಾರ್ತಿ ಜೋಶ್ನಾ ಚಿನ್ನಪ್ಪ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಆಲಂ ಬ್ರಿಟಿಷ್ ಓಪನ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್‌ಫೈನಲ್‌ನಲ್ಲೇ ಸೋತು ಹೊರನಡೆದಿದ್ದಾರೆ.
ನ್ಯೂಜಿಲೆಂಡ್‌ನ ಜೊಯ್ಲಿ ಕಿಂಗ್ 11-6, 11-7, 8-11, 11-1 ಅಂಕಗಳಿಂದ ಭಾರತದ ಅನುಭವಿ ಆಟಗಾರ್ತಿ ಜೋಶ್ನಾ ಚಿನ್ನಪ್ಪ ವಿರುದ್ಧ ಜಯ ದಾಖಲಿಸಿದರು.  ವಿಶ್ವದ 21ನೇ ಶ್ರೇಯಾಂಕಿತೆ ಜೋಶ್ನಾ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಸಹ ಅಂತಿಮವಾಗಿ 43 ನಿಮಿಷಗಳ ಹೋರಾಟದ ನಂತರ ಸೋತರು. ಜೋಶ್ನಾ ನಿರ್ಗಮನದೊಂದಿಗೆ ಭಾರತದ ಸವಾಲೂ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ತವರಿನ ಅಗ್ರಮಾನ್ಯ ಆಟಗಾರ್ತಿ, ವಿಶ್ವದ 10ನೇ ಶ್ರೇಯಾಂಕಿತೆ ದೀಪಿಕಾ ಪಳ್ಳಿಕಲ್ ಮೊದಲ ಸುತ್ತಿನಲ್ಲಿ ಸೋತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.