ಪ್ಲೇಆಫ್ಗಾಗಿ ಸನ್ರೈಸರ್ಸ್, ನೈಟ್ರೈಡರ್ಸ್ ಫೈಟ್
ಹೈದರಾಬಾದ್: ಐಪಿಎಲ್ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಪ್ಲೇಆಫ್ ಸುತ್ತಿಗೆ ಪ್ರವೇಶಿಸಲು ಕಾತರದಿಂದ ಕಾಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್ರೈಡರ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ಅಂತಿಮವಾಗಿ ಗೆದ್ದು ಬೀಗುವರ್ಯಾರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.
ಭಾನುವಾರ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಈ ಎರಡು ತಂಡಗಳು ಕಾದಾಟ ನಡೆಸುತ್ತಿದ್ದು, ಉಭಯ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಲು ಗೆಲವಿನ ಅಗತ್ಯತೆಯಲ್ಲಿವೆ.
ಕಳೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆಘಾತಕಾರಿ ಸೋಲನುಭವಿಸಿದ ನಂತರ ಸನ್ರೈಸರ್ಸ್ನ ಪ್ಲೇಆಫ್ ಸುತ್ತಿನ ಕನಸಿಗೆ ಅಡ್ಡಿ ಉಂಟಾಗಿದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಇನ್ನು ಕೆಕೆಆರ್ ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸುಲಭ ಗೆಲವು ದಾಖಲಿಸಿದ್ದು, ಪ್ಲೇ ಆಫ್ ಸುತ್ತಿನತ್ತ ಹೆಜ್ಜೆ ಹಾಕುತ್ತಿದೆ. ಅಲ್ಲದೆ ಈ ಪಂದ್ಯದಲ್ಲಿ ಆತ್ಮ ವಿಶ್ವಾಸದಿಂದ ಕಣಕ್ಕಿಳಿಯಲಿದ್ದು, ಯಾವ ರೀತಿಯ ಫಲಿತಾಂಶ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು. ಕೆಕೆಆರ್ ತಂಡ ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆಲವು ಹಾಗೂ 5ರಲ್ಲಿ ಸೋಲನುಭವಿಸಿದ್ದು, 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಹಾಗಾಗಿ ಉಳಿದಿರುವ ನಾಲ್ಕು ಪಂದ್ಯಗಳಲ್ಲಿ ಕೆಕೆಆರ್ ಗೆಲವು ದಾಖಲಿಸಿದರೆ ಮಾತ್ರ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆಯುವ ಅವಕಾಶವಿರಲಿದೆ. ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ನೋಡುವುದಾದರೆ, ಆಡಿರುವ 10 ಪಂದ್ಯಗಳಲ್ಲಿ 4ರಲ್ಲಿ ಗೆಲವು ಹಾಗೂ 6ರಲ್ಲಿ ಸೋಲನುಭವಿಸಿದ್ದು, ಪ್ಲೇ ಆಫ್ಗೆ ಪ್ರವೇಶಿಸಲು ಕಠಿಣ ಹಾದಿಯಲ್ಲಿ ಸಾಗುತ್ತಿದೆ. ಹಾಗಾಗಿ ಸನ್ರೈಸರ್ಸ್ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವುದರ ಜತೆಗೆ ಉತ್ತಮ ರನ್ರೇಟ್ ಕಾಯ್ದುಕೊಳ್ಳುವ ಒತ್ತಡವನ್ನು ಎದುರಿಸುತ್ತಿದೆ.
ಇನ್ನು ಎರಡೂ ತಂಡಗಳ ಬಲಾಬಲವನ್ನು ನೋಡುವುದಾರೆ, ಎರಡೂ ತಂಡಗಳ ಬ್ಯಾಟಿಂಗ್ ವಿಭಾಗ ಪಂದ್ಯಾವಳಿಯ ಆರಂಭದಲ್ಲಿ ವೈಫಲ್ಯ ಅನುಭವಿಸಿತ್ತು. ಆದರೆ ಕಳೆದ ಕೆಲವು ಪಂದ್ಯಗಳಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ವಿಭಾಗ ಲಯಕ್ಕೆ ಮರಳಿದ್ದು, ತಂಡದಲ್ಲಿ ಹೊಸ ಉತ್ಸಾಹ ತುಂಬಿದೆ.
ಕೆಕೆಆರ್ ತಂಡದಲ್ಲಿ ಗೌತಮ್ ಗಂಭೀರ್ ಹಾಗೂ ರಾಬಿನ್ ಉತ್ತಪ್ಪ ಆರಂಭಿಕ ಜೋಡಿಯಾಗಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಕಾಲಿಸ್, ಮನೀಶ್ ಪಾಂಡೆ, ಶಕೀಬ್ ಅಲ್ ಹಸನ್, ಸೂರ್ಯಕುಮಾರ್ ಯಾದವ್ ಉತ್ತಮ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸಬೇಕಿದೆ.
ಸನ್ರೈಸರ್ಸ್ ತಂಡ ಕಳೆದ ಪಂದ್ಯದಲ್ಲಿ 200ರ ಗಡಿ ದಾಟಿದ್ದು, ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಮನೋಬಲ ಹೆಚ್ಚಿಸಿಕೊಂಡಿದೆ. ಧವನ್ ಕಳೆದ ಪಂದ್ಯದಲ್ಲಿ ಸ್ವಲ್ಪ ರನ್ ಗಳಿಸಿದ್ದಾರೆ. ಜತೆಗೆ ಎರಾನ್ ಫಿಂಚ್, ನಮನ್ ಓಜಾ, ಡೇವಿಡ್ ವಾರ್ನರ್ ಅಬ್ಬರದ ಬ್ಯಾಟಿಂಗ್ ತಂಡಕ್ಕೆ ಜೀವ ತುಂಬಿದೆ.
ಇಂದಿನ ಪಂದ್ಯಗಳು
ಚೆನ್ನೈ ಸೂಪರ್ ಕಿಂಗ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
(ಸ್ಥಳ-ರಾಂಚಿ, ಸಮಯ-ಸಂಜೆ 4 ಗಂಟೆ)
ಸನ್ರೈಸರ್ಸ್ ಹೈದರಾಬಾದ್- ಕೋಲ್ಕತಾ ನೈಟ್ ರೈಡರ್ಸ್
(ಸ್ಥಳ-ಹೈದರಾಬಾದ್, ಸಮಯ-ರಾತ್ರಿ 8 ಗಂಟೆ)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

