ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್
ಬೆಂಗಳೂರು: ಫೈವ್ ಸ್ಟಾರ್ ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಸದಾಶಿವನಗರ ಕ್ಲಬ್ವತಿಯಿಂದ ಆಯೋಜಿಸಲಾಗಿದೆ. 13, 15, 17, 19 ವರ್ಷದೊಳಗಿನವರು ಸೇರಿದಂತೆ, ಪುರುಷ, ಮಹಿಳೆ ಹಾಗೂ ಹಿರಿಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪಂದ್ಯಾವಳಿ ಮೇ 25ರಿಂದ 30, 2014ರವರೆಗೆ ನಡೆಯಲಿದೆ. ಕಳೆದ 23 ವರ್ಷಗಳಿಂದ ನಡೆಯುತ್ತಿರುವ ಪಂದ್ಯಾವಳಿಗೆ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ಸ್ಪರ್ಧಿಗಳು ಪ್ರವೇಶ ಪಡೆದಿದ್ದಾರೆ. ಈಗಾಗಲೇ ಒಟ್ಟು 1124 ಸ್ಪರ್ಧಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ 860 ಅಭ್ಯರ್ಥಿಗಳು ಪ್ರವೇಶ ಪಡೆದುಕೊಂಡಿದ್ದರು. ಪಂದ್ಯಾವಳಿಯಲ್ಲಿ ಒಟ್ಟು ರು. 1.80 ಲಕ್ಷ ಬಹುಮಾನ ನೀಡಲಾಗುತ್ತಿದೆ. ಇದರಲ್ಲಿ ಹಿರಿಯರ ವಿಭಾಗಕ್ಕೆ ರು. 80,000 ಹಾಗೂ ಕಿರಿಯರ ವಿಭಾಗಕ್ಕೆ ರು. 1 ಲಕ್ಷ ಬಹುಮಾನ ನೀಡಲಾಗುತ್ತದೆ. ಪುರುಷರ ವಿಭಾಗದಲ್ಲಿ ಅಭಿಷೇಕ್ ಎಲಿಗಾರ್ ಮತ್ತು ಡೇನಿಯಲ್ ಎಸ್. ಫರಿದ್ ಅವರು ಪ್ರಮುಖ ಆಟಗಾರರು ಎನಿಸಿದ್ದಾರೆ. ಇನ್ನು ಮಹಿಳೆಯರ ವಿಭಾಗದಲ್ಲಿ ರುತ್ ಮಿಶಾ ವಿ. ಹಾಗೂ ಸವಿತಾ ಆರ್.ಎನ್ ಅವರು ಪ್ರಮುಖ ಸ್ಪರ್ಧಿಗಳಾಗಿದ್ದಾರೆ. ಜೂನಿಯರ್ ವಿಭಾಗಕ್ಕೆ ಮೇ 25 ಮತ್ತು 26ರಂದು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಾದ ಬೆಳಗಾವಿ, ಶಿವಮೊಗ್ಗ, ದಾವಣಗೇರೆ, ಹುಬ್ಬಳ್ಳಿ, ಧಾರವಾಡದಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಿರುವುದು ಈ ಬಾರಿ ಪಂದ್ಯಾವಳಿಯ ವಿಶೇಷವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

