ಕ್ರೀಡೆ

ಗೆದ್ದ ಶರಪೋವಾ

Published On :

ಪ್ಯಾರಿಸ್: ಎದುರಾಳಿಯ ವಿರುದ್ಧ ಸಂಪೂರ್ಣ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದ ರಷ್ಯಾದ ಮಾರಿಯಾ ಶರಪೋವಾ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ತಮ್ಮ ದೇಶದವರೇ ಆದ ಸೆನಿಯಾ ಪರ್ವೆಕ್ ವಿರುದ್ಧ ಗೆಲವು ದಾಖಲಿಸಿದ್ದಾರೆ.
ಸೋಮವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಶರಪೋವಾ, 6-1, 6-2 ಸೆಟ್‌ಗಳ ಅಂತರದಲ್ಲಿ ಗೆಲವು ದಾಖಲಿಸುವ ಮೂಲಕ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದ್ದಾರೆ.
ಆರಂಭದಿಂದ ಅಂತ್ಯದವರೆಗೂ ಪರ್ವೆಕ್ ವಿರುದ್ಧ ಬಿಗಿ ಹಿಡಿತ ಸಾಧಿಸಿದ ಶರಪೋವಾ ಯಾವುದೇ ಹಂತದಲ್ಲೂ ಎದುರಾಳಿಗೆ ಚೇತರಿಸಿಕೊಳ್ಳಲು ಅವಕಾಶ ನೀಡದೆ ಗೆಲವು ದಾಖಲಿಸಿದರು.
ಮತ್ತೊಂದು ಪಂದ್ಯದಲ್ಲಿ ಸ್ಲೊವಾಕಿಯಾದ ಡೊಮಿನಿಕಾ ಕಿಬುಲ್ಕೋವಾ ತಮ್ಮ ಎದುರಾಳಿ ಫ್ರಾನ್ಸ್‌ನ ವರ್ಗಿನ್ ರಜಾನೊ ವಿರುದ್ಧ 7-5, 6-0 ಸೆಟ್‌ಗಳ ಅಂತರದಲ್ಲಿ ಗೆಲವು ದಾಖಲಿಸಿದ್ದಾರೆ.
ಇನ್ನು ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಸೆರ್ಬಿಯಾದ ಆಟಗಾರ ನೊವಾಕ್ ಜೋಕೊವಿಚ್ ತಮ್ಮ ಎದುರಾಳಿ ಪೊರ್ಚುಗಲ್‌ನ ಜಾವೊ ಸೌಸಾ ವಿರುದ್ಧ 6-1, 6-2, 6-4 ಸೆಟ್‌ಗಳ ಅಂತರದಲ್ಲಿ ಗೆಲವು ದಾಖಲಿಸಿದ್ದಾರೆ. ಆರಂಭಿಕ ಎರಡು ಸೆಟ್‌ಗಳನ್ನು ಸುಲಭವಾಗಿ ಗೆದ್ದುಕೊಂಡ ಜೋಕೊವಿಚ್ ನಂತರ ಮೂರನೇ ಸೆಟ್‌ನಲ್ಲಿ ಪ್ರಬಲ ಪೈಪೋಟಿ ಎದುರಿಸಿದರಾದರೂ, ಅಂತಿಮವಾಗಿ ಮೇಲುಗೈ ಸಾಧಿಸಿ ಜಯ ಕಂಡುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.