ಕ್ರೀಡೆ

ಲೀ ನಾಗೆ ಶಾಕ್, ಫೆರರ್ ಮುಂದಡಿ

Published On :

ಪ್ಯಾರಿಸ್: ಎದುರಾಳಿಯ ಪ್ರತಿರೋಧವನ್ನು ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾದ ಡೇವಿಡ್ ಫೆರರ್ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಗೆಲವು ದಾಖಲಿಸಿದ್ದಾರೆ.
ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ನೆದರ್ಲೆಂಡ್‌ನ ಸಿಜ್‌ಸ್ಲಿಂಗ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಡೇವಿಡ್ ಫೆರರ್ 6-4, 6-3, 6-1 ಸೆಟ್‌ಗಳ ಅಂತರದಲ್ಲಿ ಗೆಲವು ದಾಖಲಿಸಿದರು.
ಆರಂಭದಲ್ಲಿ ಸಿಜ್‌ಸ್ಲಿಂಗ್ ಎದುರಾಳಿ ಫೆರರ್‌ಗೆ ಉತ್ತಮ ಪೈಪೋಟಿ ನೀಡುವ ಲಕ್ಷಣ ತೋರಿದರಾದರೂ ಕ್ರಮೇಣ ತಮ್ಮ ನಿಯಂತ್ರಣ ಕಂಡುಕೊಳ್ಳಲು ವಿಫಲರಾದ ಹಿನ್ನೆಲೆಯಲ್ಲಿ ಪಂದ್ಯವನ್ನು ಕೈ ಚೆಲ್ಲಿದರು. ಇನ್ನು ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸೆರ್ಬಿಯಾದ ಆಟಗಾರ್ತಿ ಅನಾ ಇವಾನೊವಿಚ್ ತಮ್ಮ ಎದುರಾಳಿ ಫ್ರಾನ್ಸ್‌ನ ಕ್ಯಾರೊಲಿನ್ ಗಾರ್ಸಿಯಾ ವಿರುದ್ಧ ಸುಲಭ ಗೆಲವು ದಾಖಲಿಸಿದ್ದಾರೆ. ಆರಂಭದಿಂದಲೇ ಲಯ ಕಂಡುಕೊಂಡ ಅನಾ 6-1, 6-3 ನೇರ ಸೆಟ್‌ಗಳ ಅಂತರದಲ್ಲಿ ಗೆಲವು ದಾಖಲಿಸಿದರು. ಈ ಮೂಲಕ ಎರಡನೇ ಸುತ್ತಿಗೆ ಪ್ರವೇಶಿಸಿದರು.
ಮಹಿಳೆಯರ ಸಿಂಗಲ್ಸ್‌ನ ಮತ್ತೊಂದು ಪಂದ್ಯದಲ್ಲಿ ಚೀನಾದ ಲೀ ನಾ ತಮ್ಮ ಎದುರಾಳಿ ಫ್ರಾನ್ಸ್‌ನ ಕ್ರಿಸ್ಟಿನಾ ಮಾಲ್ಡೆನೊವಿಕ್ ವಿರುದ್ಧ ಪರಾಭವಗೊಂಡಿದ್ದಾರೆ. ಪಂದ್ಯ ಪ್ರಬಲ ಪೈಪೋಟಿಯಿಂದ ಕೂಡಿತ್ತಾದರೂ ಅಂತಿಮವಾಗಿ ಕ್ರಿಸ್ಟಿನಾ 7-5, 3-6, 6-1 ಸೆಟ್‌ಗಳ ಅಂತರದಲ್ಲಿ ಗೆಲವಿನ ನಗೆ ಬೀರುವಲ್ಲಿ ಯಶಸ್ವಿಯಾದರು.
ಇನ್ನು ಸೋಮವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಎದುರಾಳಿ ವಿರುದ್ಧ ಸಂಪೂರ್ಣ ಬಿಗಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ರಾಫೆಲ್ ನಡಾಲ್ ತಮ್ಮ ಎದುರಾಳಿ ಅಮೆರಿಕಾದ ರಾಬಿ ಜಿನೆಪ್ರಿ ವಿರುದ್ಧ ಗೆಲವು ದಾಖಲಿಸಿದರು. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ನಡಾಲ್ 6-0, 6-3, 6-0 ಸೆಟ್‌ಗಳ ಅಂತರದಲ್ಲಿ ಗೆಲವುದಾಖಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.