ವಿಶ್ವಕಪ್ ಹಾಕಿಯಿಂದ ನಿಕಿನ್ ತಿಮ್ಮಯ್ಯ ಔಟ್
ದಿ ಹೇಗ್ (ನೆದರ್ಲೆಂಡ್ಸ್): ವಿಶ್ವಕಪ್ ಹಾಕಿ ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಭಾರತ ತಂಡಕ್ಕೆ ಮತ್ತೊಂದು ಆಘಾತ ಉಂಟಾಗಿದ್ದು, ಭರವಸೆಯ ಮುನ್ಪಡೆ ಆಟಗಾರ ನಿಕಿನ್ ತಿಮ್ಮಯ್ಯ ಗಾಯಕ್ಕೆ ತುತ್ತಾಗಿರುವ ಕಾರಣ ಟೂರ್ನಿಯಿಂದ ಹೊರಗುಳಿಯಬೇಕಾಗಿದೆ.
ನಿಕಿನ್ ಸ್ಥಾನದಲ್ಲಿ ಮತ್ತೊಬ್ಬ ಆನುಭವಿ ಆಟಗಾರ ಯುವರಾಜ್ ವಾಲ್ಮೀಕಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಮೂಲದ ಆಟಗಾರ ನಿಕಿನ್ ತಿಮ್ಮಯ್ಯ ಬಲಗಾಲಿನ ಸ್ನಾಯುಸೆಳೆತಕ್ಕೆ ಒಳಗಾಗಿದ್ದು, ಅವರಿಗೆ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಅಭ್ಯಾಸದ ವೇಳೆ ಗಾಯಗೊಂಡಿದ್ದ ಮುನ್ನಡೆ ಆಟಗಾರ ರಮಣ್ದೀಪ್ ಸಿಂಗ್ ಟೂರ್ನಿಯಿಂದ ಹೊರಗುಳಿಯುವಂತಾಗಿತ್ತು. ಅವರ ಸ್ಥಾನಕ್ಕೆ ಲಲಿತ್ ಉಪಾಧ್ಯಾಯ್ ಅವರನ್ನು ಸೇರಿಸಿಕೊಳ್ಳಲಾಗಿತ್ತು. ವಿಶ್ವಕಪ್ ಹಾಕಿ ಟೂರ್ನಿ ಮೇ 31ರಿಂದ ಜೂನ್ 15ರ ವರೆಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

